23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ) ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಇಂದಬೆಟ್ಟು ವಲಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ (ಟ್ಯೂಷನ್ ಕ್ಲಾಸ್ ) ಕಾರ್ಯಕ್ರಮವನ್ನು ಬಂಗಾಡಿ ಪ್ರೌಡ ಶಾಲೆಯಲ್ಲಿ ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಸುರೇಂದ್ರ ರವರು ಉದ್ಘಾಟಿಸಿ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾಗಿರುವ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಭಾಗದ 10 ನೇತರಗತಿಯ ಮಕ್ಕಳಿಗೆ ಟ್ಯೂಷನ್ ಕ್ಲಾಸ್ ಅವಶ್ಯಕತೆಯಿದ್ದು ಈ ತರಬೇತಿಯನ್ನು ಹಮ್ಮಿಕೊಳ್ಳ ಲಾಗಿದೆ. ತರಬೇತಿಯಲ್ಲಿ ಮಕ್ಕಳು ಉತ್ತಮ ರೀತಿಯಲ್ಲಿ ಪಾಲ್ಗೊಂಡು ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವಂತೆ ತಿಳಿಸಿದರು.

ಶಾಲೆಯ ಪ್ರಭಾರ ಶಿಕ್ಷಕರಾದ ರೋಶನ್ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಟ್ಯೂಷನ್ ಕ್ಲಾಸನ್ನು ನಮ್ಮ ಶಾಲೆಯಲ್ಲಿ ಹಮ್ಮಿಕೊಂಡಿರುವುದು ನಮ್ಮ ಅದೃಷ್ಟ ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ಉತ್ತಮ ಅಂಕವನ್ನು ಪಡೆಯಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಉಷಾಪ್ರಸಾದ್ ,ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ವಿಶೇಷ ತರಗತಿಯ ಶಿಕ್ಷಕಿ ಕವಿತಾ ಶಾಲಾ ಶಿಕ್ಷಕರಾದ ವಿಲ್ಮಾಪೆರ್ನಾಂಡೀಸ್ ಸೇವಾಪ್ರತಿನಿಧಿ ಶೈಲಾ ಉಪಸ್ಥಿತರಿದ್ದರು

Related posts

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳಿಂದ ನಿವೃತ್ತ ಯೋಧ ವಿಕ್ರಂ ಜೆ.ಎನ್ ರಿಗೆ ಸನ್ಮಾನ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!