ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಉಜಿರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ” ಡಿ.3 ರಂದು ಉಜಿರೆ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲಾ ಬಳಿ ನಡೆಯಲಿದೆ ಎಂದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ನ.28ರಂದು ಗುರುನಾರಾಯಣ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ನಿವೃತ್ತ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟನವರ್, ತುಳುನಾಡ ದೈವರಾಧನೆ ವಿಮರ್ಷಕ ತಮಣ್ಣ ಶೆಟ್ಟಿ, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ, ಸೌಜನ್ಯಳ ತಾಯಿ ಕುಸುಮಾವತಿ ಚಂದಪ್ಪ ಗೌಡ, ಹೈ ಕೋರ್ಟ್ ವಕೀಲರು ಮೋಹಿತ್ ಕುಮಾರ್, ಮೈಸೂರು ಒಡನಾಡಿ ಸೇವಾ ಸಂಸ್ಥೆಯ ಎಂ.ಎಲ್. ಪರಶುರಾಮು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಹಾಗೂ ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿಯನ್ನು ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ ಉಪಸ್ಥಿತರಿದ್ದರು.