April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾ) ಉಜಿರೆಯ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯ ಸೌರಭ ಮತ್ತು ಇಕೋ ಕ್ಲಬ್ ಆಯೋಜಿಸಿದ cooking without fire ಎಂಬ( interclass level ) ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು.

 ವಿದ್ಯಾರ್ಥಿಗಳಲ್ಲಿ ಬೆಂಕಿಯ ಬಳಕೆ ಇಲ್ಲದೆ ತುರ್ತು ಸಂದರ್ಭದಲ್ಲಿ ಕೆಲವೊಂದು ಹಸಿ ಪದಾರ್ಥಗಳಿಗೆ ಪೌಷ್ಠಿಕ ಮಿಶ್ರಣವನ್ನು ಬೆರೆಸಿ ವಿಶೇಷವಾದ ಆಹಾರ ವನ್ನು ತಯಾರಿಸುವುದು, ಮೂಲ ಆಹಾರ ವಾಸ್ತುವಿನಲ್ಲಿ ಇರುವ ನೈಜ ಪೋಷ್ಟಿಕ ಅಂಶಗಳು ಬೇಯಿಸಿದಾಗ ಇಲ್ಲವಾಗುವುದು,  ಬೇಯಿಸದೆ ಇರುವ ಆಹಾರವನ್ನು ಅಂದವಾಗಿ ಅಲಂಕರಿಸಿ ಆಯೋಜಿಸುವಂತಹ ಸೃಜನಶೀಲತೆ ಬೆಳೆಸುವ ಉದ್ದೇಶದಿಂದ ಈ ಚಟುವಟಿಕೆಯನ್ನು ಆಯೋಜಿಸಲಾಯಿತು.

 ಕಾರ್ಯ್ರಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ತೀರ್ಪುಗಾರರಾಗಿ ಗೃಹವಿಜ್ಞಾನ ವಿಭಾಗದ ಮುಖ್ಯಸ್ಥೆ ಶೋಭ ಎಸ್. ಹಾಗು ಸಸ್ಯಶಾಸ್ತ್ರ ವಿಭಾಗದ ಪ್ರಾದ್ಯಾಪಕಿಯಾದ ಶಕುಂತಲಾ ಬಿ. ಅವರು ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ, ಸಹಾಯಕ ಪ್ರಾಧ್ಯಾಪಕರಾದ ಅಭಿಲಾಷ್ ಕೆ.ಎಸ್, ಕು| ಸ್ವಾತಿ, ಕು| ಮಂಜುಶ್ರೀ ಉಪಸ್ಥಿತರಿದ್ದರು. 

Related posts

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya
error: Content is protected !!