ಪುಂಜಾಲಕಟ್ಟೆ: ಇಲ್ಲಿಯ ಕೆ ಪಿ ಎಸ್ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಕಾಲೇಜು ವಾರ್ಷಿಕೋತ್ಸವವು ಇತ್ತೀಚೆಗೆ ಕಾಲೇಜು ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ಮನಸ್ಸನ್ನು ಶಕ್ತಿಯುತಗೊಳಿಸಬೇಕೆಂದು ಹಿತವಚನ ನೀಡಿದರು.
ಮುಖ್ಯ ಅತಿಥಿಗಳಾಗಿ ಲೇಡಿಗೋಶನ್ ಆಸ್ಪತ್ರೆಯ ಮುಖ್ಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ ಆರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜೀವನದಲ್ಲಿ ಕಷ್ಟದ ಅನುಭವ ಪಡೆದಷ್ಟು ಹೆಚ್ಚು ಎತ್ತರಕ್ಕೆ ಏರುತ್ತಿರಿ ಎಂದು ಅನುಭವದ ಮಾತುಗಳಾಡಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಡಾ. ಶರತ್ ಕುಮಾರ್, ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಸುಕುಮಾರ್ ಜೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿವಿಧ ಬಹುಮಾನಗಳನ್ನು ವಿತರಣೆ ಮಾಡಿದರು.
ಮಡಂತ್ಯಾರು ಹಾಲಿ ಅಧ್ಯಕ್ಷರಾದ ರೂಪ ನವೀನ್ ಅಧ್ಯಕ್ಷತೆ ವಹಿಸಿದ್ದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಕೆ ಪಿ ಎಸ್ ನ ಮುಖ್ಯೋಪಾಧ್ಯಾಯರುಗಳಾದ ಉದಯ್ ಕುಮಾರ್ ಮತ್ತು ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರಾದ ಹನೀಫ್ ಭಾಗವಹಿಸಿದ್ದರು. ಮಡಂತ್ಯಾರು ಪಂಚಾಯತ್ ಮಾಜಿ ಅಧ್ಯಕ್ಷರು ಶ್ರೀಮತಿ ಶಶಿಪ್ರಭಾ ಉಪಸ್ಥಿತರಿದ್ದರು.
ಕಾಲೇಜು ಪ್ರಾಂಶುಪಾಲರು ಡಾ. ಸರೋಜಿನಿ ಆಚಾರ್ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಜಯಶ್ರೀ ಕೆ ಏನ್ ಮುದ್ರಿತ ವರದಿ ವಾಚಿಸಿದರು. ಉಪನ್ಯಾಸಕರಾದ ತಾಹೀರ ಬಾನು ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.