24 C
ಪುತ್ತೂರು, ಬೆಳ್ತಂಗಡಿ
April 3, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬೆಳ್ತಂಗಡಿ: ತಾಲೂಕಿನ ಬಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳಾಜೆ ಮತ್ತು ಡೆಂಜೋಲಿ ಸಂಪರ್ಕಿಸುವ ರಸ್ತೆಯ ಬಗ್ಯೋಟ್ಟು ಸಮೀಪ ಬೃಹತ್ ಮರವೊಂದು ಮಂಗಳವಾರ ಸಂಜೆ ರಸ್ತೆಗೆ ಅಡ್ಡವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಾಹನ ಸಂಚಾರ ಹಾಗೂ ಸಾರ್ವಜನಿಕರು ತೆರಳಲು ಕಷ್ಷವಾಗಿದೆ. ಮರಬಿದ್ದು ಕೆಲವು ತಾಸು ಕಳೆದರೂ ಸಂಭಂಧ ಪಟ್ಟವರಿಂದ ಮರ ತೆರವುಗೊಳಿಸುವ ಕೆಲಸ ಆಗಲಿಲ್ಲ.

ಬೊಳ್ಳಾಜೆಯಿಂದ ಡೆಂಜೋಲಿ ತನಕ ರಸ್ತೆ ಬದಿ ಅಪಾಯಕಾರಿ ಮರಗಳು ಬೆಳೆದಿದ್ದು ತೆರವುಗೊಳಿಸಲು ಸಾರ್ವಜನಿಕರು ಹಲವು ಬಾರಿ ಗ್ರಾಮ ಸಭೆಗಳಲ್ಲಿ ಪ್ರಸ್ತಾಪಿಸಿದ್ದಾರೆ. ಹಾಗೂ ಅರಣ್ಯ ಇಲಾಖೆ,ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದಾರೆ.ರಸ್ತೆ ಬದಿ ಅಪಾಯಕಾರಿ ಮರಗಳು ಬೆಳದಿದ್ದು ಇಲಾಖೆಯು ಮರ ತೆರವುಗೊಳಿಸುವ ಕೆಲಸ ಮಾಡದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.

ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು, ಬಳಂಜ ಗ್ರಾಮ ಪಂಚಾಯತ್ ಕೂಡಲೇ ಈ ಭಾಗದ ಮರಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ತೆರವುಗೊಳಿಸುವ ಕೆಲಸ ಮಾಡಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ.

Related posts

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!