24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

ಬೆಳ್ತಂಗಡಿ: ತಾಲೂಕಿನ ಬಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳಾಜೆ ಮತ್ತು ಡೆಂಜೋಲಿ ಸಂಪರ್ಕಿಸುವ ರಸ್ತೆಯ ಬಗ್ಯೋಟ್ಟು ಸಮೀಪ ಮರವೊಂದು ನ.28 ರಂದು ಸಂಜೆ ರಸ್ತೆಗೆ ಅಡ್ಡವಾಗಿ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು ಇಂದು ಬೆಳಿಗ್ಗೆ ಸಾರ್ವಜನಿಕರು ತೆರವುಗೊಳಿಸಿದರು.

ಸ್ಥಳಕ್ಕೆ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡ,ಲೈನ್ ಮ್ಯಾನ್ ಜಟ್ಡಿಂಗ ರವರು ಆಗಮಿಸಿ ಪರಿಶೀಲಿಸಿದರು .ಬೊಳ್ಳಾಜೆಯಿಂದ ಡೆಂಜೋಲಿ ತನಕ ರಸ್ತೆ ಬದಿ ಅಪಾಯಕಾರಿ ಮರಗಳು ಬೆಳೆದಿದ್ದು ಅಪಾಯಕಾರಿ ಮರಗಳನ್ನು ಶೀಘ್ರವಾಗಿ ತೆರವುಗೊಳಿಸಲು ಸಾರ್ವಜನಿಕರು ಒತ್ತಾಯಿಸಿದರು. ಅರಣ್ಯ ಅಧಿಕಾರಿ ಹಾಗೂ ಪಂಚಾಯತ್ ಅಧ್ಯಕ್ಷರು ಮರ ತೆರವುಗೊಳಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಉದ್ಯಮಿ ಕಾಸಿಂ ಕಟ್ಟೆ, ಸಂತೋಷ್ ಪಿ ಕೋಟ್ಯಾನ್, ಜಗದೀಶ್ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಬಗ್ಯೋಟ್ಟು ಉಪಸ್ಥಿತರಿದ್ದರು .

Related posts

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!