ಬೆಳ್ತಂಗಡಿ: ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ಬೆಳ್ತಂಗಡಿಯಲ್ಲಿ ರಚನೆ ಮಾಡಲಾಯಿತು.
ಬೆಳ್ತಂಗಡಿ ತಾಲೂಕಿನ ಯೂನಿಯನ್ ಅಧ್ಯಕ್ಷರಾಗಿ ಶ್ರೀಮತಿ ಪುಷ್ಪಾ ಆಚಾರ್ಯ ಕಲ್ಮಂಜ, ಉಪಾಧ್ಯಕ್ಷರಾಗಿ ಶ್ರೀಮತಿ ಹರಿಣಾಕ್ಷಿ ಆಚಾರ್ಯ ಬೆಳಾಲು, ಕಾರ್ಯದರ್ಶಿಯಾಗಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಅಂಡಿಂಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಸೇವಿತ ನಾವೂರು, ಕೋಶಾಧಿಕಾರಿಯಾಗಿ ಶ್ರೀಮತಿ ಚಂದ್ರಾವತಿ ಧರ್ಮಸ್ಥಳ ಇವರನ್ನು ಆಯ್ಕೆ ಮಾಡಲಾಯಿತು.
ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.
ಈ ಸಂದರ್ಭದಲ್ಲಿ ಕನಿಷ್ಟ ವೇತನ ಹೆಚ್ಚಳ ಮತ್ತು ವಿವಿಧ ಬೇಡಿಕೆಗಳ ಬಗ್ಗೆ ಒತ್ತಾಯಿಸಿ ಡಿ.1 ರಂದು ಅನಿರ್ದಾಷ್ಟವಧಿ ಮುಷ್ಕರ ನಡೆಸುವ ಬಗ್ಗೆ ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ,ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಬೆಳ್ತಂಗಡಿ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಕರ್ನಾಟಕ ರಾಜ್ಯ ಮಟ್ಟದ ಗ್ರಾ.ಪಂ. ಮಟ್ಟದ ಮುಖ್ಯ ಪುಸ್ತಕ ಬರಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾಒಕ್ಕೂಟದ ವತಿಯಿಂದ ಮನವಿ ಯನ್ನು ನೀಡಲಾಯಿತು.