29.6 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

ಉಜಿರೆ: ಕ್ರೀಡಾಪಟುಗಳು ತಮಗೆ ಸಿಗುವ ಸಮಯ ಮತ್ತು ಎಲ್ಲಾ ಸೌಲಭ್ಯಗಳ ಸದುಪಯೋಗ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯ್ಯಾತ ಕ್ರೀಡಾಪಟು ಯೇಸುದಾಸ್ ಪಿ.ಟಿ. ಹೇಳಿದರು.


ಅವರು ನ.29 ರಂದು ಉಜಿರೆಯಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯವರು ಪ್ರತಿಭಾವಂತರಾಗಿದ್ದು ಸತತ ಅಭ್ಯಾಸ ಮತ್ತು ನಿರಂತರ ಪ್ರಯತ್ನದಿಂದ ಉನ್ನತ ಸಾಧನೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ತಾನು ವಿದ್ಯಾರ್ಥಿಯಾಗಿದ್ದಾಗ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಕಾಲೇಜು ಹಾಗೂ ಆಡಳಿತ ಮಂಡಳಿಯಿಂದ ನೀಡಿದ ಸಕಾಲಿಕ ಮಾರ್ಗದರ್ಶನ, ತರಬೇತಿ ಮತ್ತು ಪ್ರೋತ್ಸಾಹವನ್ನು ಧನ್ಯತೆಯಿಂದ ಸ್ಮರಿಸಿದರು.

ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗದ ವೀಕ್ಷಕ ರಮೇಶ್ ಮಾತನಾಡಿ, ದೇಶದಲ್ಲಿರುವ 28 ವಿ.ವಿ. ಗಳಲ್ಲಿ ಮಂಗಳೂರು ವಿ.ವಿ. ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ 6ನೇ ಸ್ಥಾನದಲ್ಲಿದೆ. ಇದಕ್ಕೆ ಎಸ್.ಡಿ.ಎಂ. ಕಾಲೇಜಿನ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ ಎಂದರು.


ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಕುಮಾರ ಹೆಗ್ಡೆ ಮಾತನಾಡಿ ಸಾವಿರಾರು ಕ್ರೀಡಾಪಟುಗಳಿಗೆ ಆಡಳಿತ ಮಂಡಳಿವತಿಯಿAದ ಉಚಿತ ಊಟ, ವಸತಿಯೊಂದಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುತ್ತದೆ ಎಂದರು.


ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್., ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಎಚ್. ಮತ್ತು ಶಾರದಾ ಉಪಸ್ಥಿತರಿದ್ದರು.


ಪ್ರೊ. ಸುವೇರ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದವಿತ್ತರು.

Related posts

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya
error: Content is protected !!