ಬೆಳ್ತಂಗಡಿ: ದಾಸವರೇಣ್ಯ ಕನಕದಾಸ ಜಯಂತಿಯನ್ನು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನ.30 ರಂದು ಆಚರಿಸಲಾಯಿತು.
ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ, ಭಾರತದ ಆತ್ಮವೇ ಆಧ್ಯಾತ್ಮ, ದಾಸ ಸಾಹಿತ್ಯದ ಮೂಲಕ ಸಮಾಜಕ್ಕೆ ಆಧ್ಯಾತ್ಮದ ಸಂದೇಶ ನೀಡಿದ ಕನಕದಾಸರು ದಾಸ ಪರಂಪರೆಯಲ್ಲಿ ಶ್ರೇಷ್ಠ ರಾಗಿದ್ದಾರೆ ಎಂದರು.
ಕಂದಾಯ ನಿರೀಕ್ಷಕ ಪವಾಡಪ್ಪ ಕನಕದಾಸರ ಜೀವನದ ಬಗ್ಗೆ ಮಾತನಾಡಿದರು.
ತಹಶೀಲ್ದಾರ್ ಪೃಥ್ವಿ ಸಾನಿಕಮ್ ಅಧ್ಯಕ್ಷತೆ ವಹಿಸಿ, ಕನಕದಾಸರ ಸಾಹಿತ್ಯಗಳು ಸಮಾಜ ಸುಧಾರಣೆಗೆ ಮಾಗ೯ದಶ೯ಕವಾಗಿದೆ ಎಂದರು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಲಾಯಿಲ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿದರು.