27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

ಉಜಿರೆ: ಕ್ರೀಡಾಪಟುಗಳು ತಮಗೆ ಸಿಗುವ ಸಮಯ ಮತ್ತು ಎಲ್ಲಾ ಸೌಲಭ್ಯಗಳ ಸದುಪಯೋಗ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯ್ಯಾತ ಕ್ರೀಡಾಪಟು ಯೇಸುದಾಸ್ ಪಿ.ಟಿ. ಹೇಳಿದರು.

ಅವರು ನ.29ರಂದು ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯವರು ಪ್ರತಿಭಾವಂತರಾಗಿದ್ದು ಸತತ ಅಭ್ಯಾಸ ಮತ್ತು ನಿರಂತರ ಪ್ರಯತ್ನದಿಂದ ಉನ್ನತ ಸಾಧನೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ತಾನು ವಿದ್ಯಾರ್ಥಿಯಾಗಿದ್ದಾಗ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಕಾಲೇಜು ಹಾಗೂ ಆಡಳಿತ ಮಂಡಳಿಯಿಂದ ನೀಡಿದ ಸಕಾಲಿಕ ಮಾರ್ಗದರ್ಶನ, ತರಬೇತಿ ಮತ್ತು ಪ್ರೋತ್ಸಾಹವನ್ನು ಧನ್ಯತೆಯಿಂದ ಸ್ಮರಿಸಿದರು.

ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗದ ವೀಕ್ಷಕ ರಮೇಶ್ ಮಾತನಾಡಿ, ದೇಶದಲ್ಲಿರುವ 28 ವಿ.ವಿ. ಗಳಲ್ಲಿ ಮಂಗಳೂರು ವಿ.ವಿ. ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ 9ನೇ ಸ್ಥಾನದಲ್ಲಿದೆ. ಇದಕ್ಕೆ ಎಸ್.ಡಿ.ಎಂ. ಕಾಲೇಜಿನ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಕುಮಾರ ಹೆಗ್ಡೆ ಮಾತನಾಡಿ ಸಾವಿರಾರು ಕ್ರೀಡಾಪಟುಗಳಿಗೆ ಆಡಳಿತ ಮಂಡಳಿವತಿಯಿAದ ಉಚಿತ ಊಟ, ವಸತಿಯೊಂದಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುತ್ತದೆ ಎಂದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್., ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರಮೇಶ್ ಎಚ್. ಮತ್ತು ಶಾರದಾ ಉಪಸ್ಥಿತರಿದ್ದರು.
ಪ್ರೊ. ಸುವೇರ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದವಿತ್ತರು.

Related posts

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya
error: Content is protected !!