September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

ಬೆಳ್ತಂಗಡಿ: ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಕಳೆದ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಕುಟುಂಬವನ್ನು ಪ್ರಕರಣವನ್ನು ಬೆಳ್ತಂಗಡಿ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ ಆರೋಪಿ ಮರಣ ಹೊಂದಿರುವುದು ಬೆಳಕಿಗೆ ಬಂದಿದೆ.

ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ಸಿ.ಎಂ ರಾಮಯ್ಯ @ ಸಿ.ಎಂ ರಾಮು @ ಸಿ.ಎಂ ಮಾಮು @ ಸಿ.ಎಂ ಬಿದ್ಧಪ್ಪ (33 ವ) ಎಂಬವರ ಪತ್ತೆಗಾಗಿ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪಿಎಸ್‌ಐ ಧನರಾಜ್ ಟಿ.ಎಂ. ಮತ್ತು ಪಿಎಸೈ(ತನಿಖೆ) ಚಂದ್ರಶೇಖರ್ ಎ ಎಮ್ ರವರ ನೇತೃತ್ವದಲ್ಲಿ ಹೆಚ್. ಸಿ. ಗಂಗಾಧರ್ ಬಿ. ಮತ್ತು ಹೆಚ್ .ಸಿ. ಆಶೋಕ್ ರವರು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ವಿವಿಧ ಕಡೆಗಳಲ್ಲಿ ಸಂಚರಿಸಿದ್ದರು. ಈ ವೇಳೆಯಲ್ಲಿ ಆರೋಪಿಯ ಮಗ ಮತ್ತು ಪತ್ನಿ ವಾಸ್ತವ್ಯವಿದ್ದ ಮನೆಯನ್ನು ಪತ್ತೆ ಹಚ್ಚಿ ಕೂಲಂಕುಷವಾಗಿ ವಿಚಾರಿಸಲಾಗಿತ್ತು.

ವಿಚಾರಣೆಯ ವೇಳೆಗೆ ಸದ್ರಿ ಸುದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿ 2019 ನ. 26 ರಂದು ಮರಣ ಹೊಂದಿರುವುದಾಗಿ ತಿಳಿದು ಬಂದಿರುತ್ತು.

ಸದ್ರಿ ವ್ಯಕ್ತಿಯ ಮರಣದ ಬಗ್ಗೆ ಸೂಕ್ತ ದಾಖಲಾತಿಗಳನ್ನು ಪಡೆದು, 56 ವರ್ಷಗಳಷ್ಟು ಹಳೆಯದಾದ ಪ್ರಕರಣವನ್ನು ಪತ್ತೆ ಹಚ್ಚಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿರುತ್ತಾರೆ.

Related posts

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!