28.6 C
ಪುತ್ತೂರು, ಬೆಳ್ತಂಗಡಿ
March 31, 2025
Uncategorized

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆಯು ಡಿ 01 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ವಹಿಸಿ ಮಾತನಾಡಿ 12 ವರ್ಷಗಳಿಗೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವ ಇದಕ್ಕೆ ನಾವೆಲ್ಲರೂ ಒಂದೇ ಮನಸ್ಸಿನಿಂದ ಒಂದು ವರ್ಷದಲ್ಲಿ ಉಳಿಯುವ ಲಾಭಾಂಶದ ಒಂದು ಪಾಲನ್ನು ಸಂತೋಷದಿಂದ ಒಪ್ಪಿಸಿದರೆ. ಒಳ್ಳೆಯ ರೀತಿಯಲ್ಲಿ ಮಾದರಿ ವೈಭವದ ಬ್ರಹ್ಮಕಲಶ ನಡೆಯಲು ಯಾವುದೇ ರೀತಿಯಲ್ಲೂ ತೊಂದರೆಯಾಗದು. ಅದ್ದರಿಂದ ಎಲ್ಲರೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದರು.

ಸಭೆಯಲ್ಲಿ ತಂತ್ರಿಗಳಾದ ಉದಯ ಪಾಂಗಣ್ಣಾಯ, ಮಾಜಿ ಶಾಸಕ ಪ್ರಭಾಕರ ಬಂಗೇರ, ಗೋಪಾಲ ಶೆಟ್ಟಿ ಕೊರ್ಯರ್, ಸುಕೇಶ್ ಕಡಂಬು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಉಪ್ಪಡ್ಕ ಉಪಸ್ಥಿತರಿದ್ದರು.

ಸಭೆಯಲ್ಲಿ ಬ್ರಹ್ಮಕಲಶೋತ್ಸವ ಯಾವ ರೀತಿಯಲ್ಲಿ ವ್ಯವಸ್ಥಿತ ರೀತಿಯಲ್ಲಿ ಮಾಡಬಹುದು ಎಂಬ ಬಗ್ಗೆ ಚರ್ಚಿಸಲಾಯಿತು.

ಚಿದಾನಂದ ಇಡ್ಯಾ ಕಾರ್ಯಕ್ರಮ ನಿರೂಪಿಸಿ, ಶಾಂತಾ ಜೆ ಬಂಗೇರ ಧನ್ಯವಾದವಿತ್ತರು.

Related posts

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya
error: Content is protected !!