24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.29ರಂದು ಶಾಲಾ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಸಂಚಾಲಕರಾದ ಅತೀ ವಂ ಫಾ| ವೊಲ್ಟರ್ ಡಿಮೆಲ್ಲೋರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿ ಆಶೀರ್ವದಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಲೆಕ್ಸಾ ಲೈಟಿಂಗ್ ಟೆಕ್ನಾಲಜಿ ಇದರ ಸಂಸ್ಥಾಪಕರು ಹಾಗೂ ನಿರ್ದೇಶಕರಾದ ರೊನಾಲ್ಡ್ ಸಿಲ್ವನ್ ಡಿಸೋಜ ರವರು ಪ್ರೋತ್ಸಾಹದ ನುಡಿಗಳಿಂದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ| ಕ್ಲಿಫರ್ಡ್ ಪಿಂಟೋರವರು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಬ್ಲೆಂಡಿನ್ ರೊಡ್ರಿಗಸ್ ಶಾಲಾ ವಾರ್ಷಿಕ ಕಾರ್ಯಕ್ರಮಗಳ ವರದಿಯನ್ನು ವಾಚಿಸಿದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು 2022-23 ನೇ ಸಾಲಿನಲ್ಲಿ ಎ‌ಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಳೆದ ಶೈಕ್ಷಣಿಕ ವರ್ಷದಲ್ಲಿ ತರಗತಿವಾರು ಗರಿಷ್ಟ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಲಾಯಿತು. ಶಾಲಾ ವಾರ್ಷಿಕೋತ್ಸವಕ್ಕೆ ಧನ ಸಹಾಯ ನೀಡಿದ ಮಹನೀಯರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಚರ್ಚ್ ನ 21 ಆಯೋಗಗಳ ಸಂಯೋಜಕಿ ಶ್ರೀಮತಿ ಪೌಲಿನ್ ರೇಗೊ, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಪ್ರಿಯಾ ಡಿಸೋಜ, ಚರ್ಚ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೆನ್ನಿ ವಾಸ್ ಉಪಸ್ಥಿತರಿದ್ದರು.


ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಮೊಬೈಲ್ ಮತ್ತು ಪ್ಲಾಸ್ಟಿಕ್ ಬಳಕೆ, ಮಾದಕ ದ್ರವ್ಯ, ಗೆಳೆತನ, ಸಮಾನತೆ ಇತ್ಯಾದಿ ವಿಷಯಗಳನ್ನು ಹೊಂದಿದ ನೃತ್ಯ ರೂಪಕಗಳ ಜೊತೆಗೆ, ಸಿನಿಮಾ ಹಾಡುಗಳಿಗೆ ಹಾಡಿ ಕುಣಿದು ನಲಿದರು. ಮರಳಿನಲ್ಲಿ ಅರಳಿದ ಕಲೆ, ಕರಾಟೆ, ಶಾಸ್ತ್ರೀಯ ಸಂಗೀತವು ವಿಶೇಷ ಆಕರ್ಷಣೆಯಾಗಿತ್ತು. ಅಪಾರ ಸಂಖ್ಯೆಯಲ್ಲಿ ಪೋಷಕರು ವಿದ್ಯಾಭಿಮಾನಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ವಿದ್ಯಾರ್ಥಿಗಳಾದ ರೀಶೆಲ್ ಬೆನ್ನಿಸ್, ಮಹಮ್ಮದ್ ರಾಯೀಝ್ ಮತ್ತು ಸಹಶಿಕ್ಷಕಿ ಶ್ರೀಮತಿ ಪ್ರೀತಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಹಶಿಕ್ಷಕಿ ಶ್ರೀಮತಿ ಅನಿತಾ ವಂದಿಸಿದರು.

Related posts

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಸವಿ ಇಲೆಕ್ಟ್ರಾನಿಕ್ಸ್ ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲಾಯನ್ಸ್, ಸವಿ ಫೂಟ್ ವೇರ್ ಹಾಗೂ ಪ್ರಗತಿ ಎಲೆಕ್ಟ್ರಿಕಲ್ & ರೆಫ್ರಿಜರೇಷನ್ ಸೇಲ್ಸ್ & ಸರ್ವಿಸ್ ಮಳಿಗೆ ಶುಭಾರಂಭ

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!