ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.29ರಂದು ಶಾಲಾ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಸಂಚಾಲಕರಾದ ಅತೀ ವಂ ಫಾ| ವೊಲ್ಟರ್ ಡಿಮೆಲ್ಲೋರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿ ಆಶೀರ್ವದಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಲೆಕ್ಸಾ ಲೈಟಿಂಗ್ ಟೆಕ್ನಾಲಜಿ ಇದರ ಸಂಸ್ಥಾಪಕರು ಹಾಗೂ ನಿರ್ದೇಶಕರಾದ ರೊನಾಲ್ಡ್ ಸಿಲ್ವನ್ ಡಿಸೋಜ ರವರು ಪ್ರೋತ್ಸಾಹದ ನುಡಿಗಳಿಂದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ| ಕ್ಲಿಫರ್ಡ್ ಪಿಂಟೋರವರು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಬ್ಲೆಂಡಿನ್ ರೊಡ್ರಿಗಸ್ ಶಾಲಾ ವಾರ್ಷಿಕ ಕಾರ್ಯಕ್ರಮಗಳ ವರದಿಯನ್ನು ವಾಚಿಸಿದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು 2022-23 ನೇ ಸಾಲಿನಲ್ಲಿ ಎ‌ಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಳೆದ ಶೈಕ್ಷಣಿಕ ವರ್ಷದಲ್ಲಿ ತರಗತಿವಾರು ಗರಿಷ್ಟ ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಲಾಯಿತು. ಶಾಲಾ ವಾರ್ಷಿಕೋತ್ಸವಕ್ಕೆ ಧನ ಸಹಾಯ ನೀಡಿದ ಮಹನೀಯರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಚರ್ಚ್ ನ 21 ಆಯೋಗಗಳ ಸಂಯೋಜಕಿ ಶ್ರೀಮತಿ ಪೌಲಿನ್ ರೇಗೊ, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಪ್ರಿಯಾ ಡಿಸೋಜ, ಚರ್ಚ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೆನ್ನಿ ವಾಸ್ ಉಪಸ್ಥಿತರಿದ್ದರು.


ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಮೊಬೈಲ್ ಮತ್ತು ಪ್ಲಾಸ್ಟಿಕ್ ಬಳಕೆ, ಮಾದಕ ದ್ರವ್ಯ, ಗೆಳೆತನ, ಸಮಾನತೆ ಇತ್ಯಾದಿ ವಿಷಯಗಳನ್ನು ಹೊಂದಿದ ನೃತ್ಯ ರೂಪಕಗಳ ಜೊತೆಗೆ, ಸಿನಿಮಾ ಹಾಡುಗಳಿಗೆ ಹಾಡಿ ಕುಣಿದು ನಲಿದರು. ಮರಳಿನಲ್ಲಿ ಅರಳಿದ ಕಲೆ, ಕರಾಟೆ, ಶಾಸ್ತ್ರೀಯ ಸಂಗೀತವು ವಿಶೇಷ ಆಕರ್ಷಣೆಯಾಗಿತ್ತು. ಅಪಾರ ಸಂಖ್ಯೆಯಲ್ಲಿ ಪೋಷಕರು ವಿದ್ಯಾಭಿಮಾನಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ವಿದ್ಯಾರ್ಥಿಗಳಾದ ರೀಶೆಲ್ ಬೆನ್ನಿಸ್, ಮಹಮ್ಮದ್ ರಾಯೀಝ್ ಮತ್ತು ಸಹಶಿಕ್ಷಕಿ ಶ್ರೀಮತಿ ಪ್ರೀತಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಹಶಿಕ್ಷಕಿ ಶ್ರೀಮತಿ ಅನಿತಾ ವಂದಿಸಿದರು.

Related posts

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಆಟಿದ ಕೂಟ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya
error: Content is protected !!