ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಧರ್ಮಸ್ಥಳ : ಧರ್ಮಸ್ಥಳದ ಯಕ್ಷಗಾನ ಮಂಡಳಿಯ ಸೇವಾ ಹರಿಕೆ ಬಯಲಾಟ ಪ್ರದರ್ಶಕ್ಕಾಗಿ ಶನಿವಾರ ತಿರುಗಾಟ ಪ್ರಾರಂಭಗೊಂಡಿದೆ.
ಧರ್ಮಸ್ಥಳದಲ್ಲಿ ಶನಿವಾರ ಪೂರ್ವಾಹ್ನ ಗಂಟೆ 8.30ಕ್ಕೆ ಛತ್ರ  ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಬಳಿಕ ಯಕ್ಷಗಾನ ಮೇಳದ ಶ್ರೀ ಗಣಪತಿ ದೇವರ ಮೂರ್ತಿಯನ್ನು ಭವ್ಯ ಮೆರವಣಿಗೆಯಲ್ಲಿ ಮಂಜುಕೃಪಾ ನಿವಾಸಕ್ಕೆ ಕೊಂಡು ಹೋಗಿ ಅಲ್ಲಿ ಗಣಹೋಮ ಮತ್ತು ಮಹಾಪೂಜೆ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು , ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ಯಕ್ಷಗಾನ ಕಲಾವಿದರು, ಮೇಳದಲ್ಲಿ  ವ್ಯವಸ್ಥಾಪಕರಾದ ಗಿರೀಶ್ ಹೆಗ್ಡೆ ಮತ್ತು ಪುಷ್ಪರಾಜ ಶೆಟ್ಟಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
2024ರ ಮೇ 23ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಕ್ತಾದಿಗಳಿಂದ ಹರಿಕೆ ಸೇವಾ ಬಯಲಾಟ ಪ್ರದರ್ಶನ ಆಯೋಜಿಸಲಾಗಿದೆ.


ಪ್ರತಿದಿನ ಸಂಜೆ 7 ಗಂಟೆಯಿಂದ 12 ಗಂಟೆವರೆಗೆ ಕಾಲಮಿತಿ ಯಕ್ಷಗಾನ ಪ್ರದರ್ಶನದಲ್ಲಿ ಪೌರಾಣಿಕ ಪ್ರಸಂಗಗಳನ್ನು ಮಾತ್ರ ಸಾದರಪಡಿಸಲಾಗುತ್ತದೆ.

Leave a Comment

error: Content is protected !!