26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

ತುಮಕೂರಿನ ಎಸ್.ಐ.ಟಿ ಮುಖ್ಯ ರಸ್ತೆಯ ಬಳಿ ಇರುವ ಜ್ವಾಲಮಾಲಾ ಕಾಂಪ್ಲೆಕ್ಸ್ ನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆಯು ನ.30 ರಂದು ಶುಭಾರಂಭಗೊಂಡಿತು.

ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆಯನ್ನು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನ, ಎಸ್.ಕೆ.ಡಿ.ಆರ್.ಡಿ.ಪಿ ಬೆಂಗಳೂರು ವಲಯದ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ, ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು ಹಾಗೂ ವಿಭಾಗೀಯ ಮುಖ್ಯಸ್ಥರಾದ ಡಾ|| ಬಿ.ಎಲ್. ಚಿದಾನಂದ, ಖ್ಯಾತ ಉದ್ಯಮಿಗಳು ಹಾಗೂ ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ರಾಮಸ್ವಾಮಿ ವಿ. ಯವರು ಉದ್ಘಾಟಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮಾರುಕಟ್ಟೆ ವಿಭಾಗದ ಜನರಲ್ ಮ್ಯಾನೇಜರ್ ಸುಧಾಕರ್, ಸಿರಿ ಬ್ರಾಂಡ್ ಮತ್ತು ಮಾರುಕಟ್ಟೆ ವಿಭಾಗದ ಸಲಹೆಗಾರರಾದ ವಿಶ್ವಜ್ಞಚಾರ್, ಇತರ ಗಣ್ಯರು, ಹಿತೈಷಿಗಳು ಹಾಗೂ ಸಿರಿ ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭ ಕೋರಿದರು.

ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್ ಮಾಲಕರಾದ ಜಿ.ಎನ್ ರಾಜು, ಶ್ರೀಮತಿ ಸುಜಾತ ದಂಪತಿ ಮತ್ತು ಮಕ್ಕಳು, ಶ್ರೀಮತಿ ಗಂಗಾಲಕ್ಷ್ಮಮ್ಮ ಮತ್ತು ಗಂಗಾರುದ್ರಯ್ಯ ದಂಪತಿ, ಮಳಿಗೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮಕ್ಕೆ ಬಂದಂತಹ ಅತಿಥಿ ಗಣ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಎಲ್ಲರ ಸಹಕಾರ ಕೋರಿದರು.

Related posts

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!