April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ – ಶಿರಸಿ, ಶ್ರೀ ಮದ್ಭಗವದ್ಗೀತಾ ಅಭಿಯಾನ ಸಮಿತಿ – ದ.ಕ , ಸಂಸ್ಕೃತ ಸಂಘ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಉಜಿರೆ – ಧರ್ಮಸ್ಥಳ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆಯಿತು.

ಉಜಿರೆಯ ಸಾಮಾಜಿಕ , ಧಾರ್ಮಿಕ ಮುಂದಾಳು ಹಾಗೂ ಕನ್ಯಾಡಿಯ ಯಕ್ಷಭಾರತಿ ( ರಿ ) ಇದರ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನದ ಸಂಯೋಜಕ ಡಾ. ಮಧುಕೇಶ್ವರ ಶಾಸ್ತ್ರೀ , ಜಿಲ್ಲಾ ಸ್ಪರ್ಧಾ ಸಂಚಾಲಕರಾದ ಡಾ. ಶ್ರೀಧರ ಭಟ್ , ಬೆಳ್ತಂಗಡಿ ತಾಲೂಕು ಸಂಯೋಜಕ ಡಾ.ಪ್ರಸನ್ನಕುಮಾರ ಐತಾಳ್ , ಸಮಿತಿಯ ಸದಸ್ಯರಾದ ಉದಯಸುಬ್ರಹ್ಮಣ್ಯ , ಭಾಗ್ಯಲಕ್ಷ್ಮಿ ಹಾಗೂ ಇತರರು ಉಪಸ್ಥಿತರಿದ್ದರು.

ಕಂಠಪಾಠ , ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಾಥಮಿಕ , ಪ್ರೌಢ ಹಾಗೂ ಪಿಯುಸಿ ವಿದ್ಯಾರ್ಥಿಗಳ ಸ್ಪರ್ಧೆ ನಡೆಯಲಿದೆ.

ಗೀತಾ ಅಭಿಯಾನದ ಬೆಳ್ತಂಗಡಿ ತಾಲೂಕು ಸಂಯೋಜಕ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿ, ವಂದಿಸಿದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya
error: Content is protected !!