26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

ಮುಂಡಾಜೆ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, ಬ್ಯಾಂಕ್ ಒಫ್ ಬರೋಡ ಮುಂಡಾಜೆ ಶಾಖೆ ಹಾಗೂ ಕರ್ನಾಟಕ ರಾಜ್ಯ ಟೈಲರ್ ಒಕ್ಕೂಟ ಕಕ್ಕಿಂಜೆ ವಲಯ ಇವರ ಸಹಕಾರದಲ್ಲಿ10 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಸಚಿನ್ ಹೆಗ್ಡೆ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. “ಗ್ರಾಮೀಣ ಪ್ರದೇಶದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕಾರ್ಯಕ್ರಮ ಆಯೋಜಿಸಿದ್ದು ಗ್ರಾಮೀಣ ಮಹಿಳೆಯರು ಸ್ವ ಉದ್ಯೋಗ ಮಾಡಲು ಸಹಕಾರಿ, ಮಹಿಳೆಯರು ತರಬೇತಿ ಪಡೆದು ಬ್ಯಾಂಕ್ ಸಾಲ ಸೌಲಭ್ಯ ಪಡೆದು ಯಶಸ್ವೀಯಾಗಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕಾರದ ಜೀವನ್ ಕೊಲ್ಯ, ಮುಂಡಾಜೆ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ, ಕರ್ನಾಟಕ ಸ್ಟೇಟ್ ಟೈಲರ್ ಕ್ಷೇತ್ರ ಸಮಿತಿಯ ಅಧ್ಯಕ್ಷೆ ಶ್ರೀಮತಿ ವೇದಾವತಿ, ಬ್ಯಾಂಕ್ ಒಫ್ ಬರೋಡ ಮುಂಡಾಜೆ ಶಾಖೆ ಯ ವ್ಯವಸ್ಥಾಪಕಾರದ ಅಶ್ವಿನ್, ಕಕ್ಕಿಂಜೆ ವಲಯ ದ ಅಧ್ಯಕ್ಷರಾದ ವಿನಯ ಚಂದ್ರ ,ತರಬೇತುದಾರರಾದ ಶ್ರೀಮತಿ ಸುಮನ ಉಪಸ್ಥಿತರಿದ್ದರು.

ಶ್ರೀಮತಿ ವನಿತಾ ಕಾರ್ಯಕ್ರಮ ನಿರೂಪಣೆ ಮಾಡಿದರು. ಮುಂಡಾಜೆ ಗ್ರಾಮ ವ್ಯಾಪ್ತಿಯ ಸುತ್ತ ಮುತ್ತ ಊರಿನ ಸುಮಾರು 25 ಮಹಿಳೆಯರು ಈ 10 ದಿವಸದ ತರಬೇತಿ ಪಡೆಯಲಿದ್ದಾರೆ.

Related posts

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya
error: Content is protected !!