September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

ಇಂದಬೆಟ್ಟು : ಕರ್ನಾಟಕ ಸರಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಆಶ್ರಯದಲ್ಲಿ ಬಾಲವಿಕಾಸ ಸಮಿತಿ, ಸ್ತ್ರೀ ಶಕ್ತಿ ಸಂಘ, ಗ್ರಾಮಾಭಿವೃದ್ಧಿ ಸ್ವ ಸಹಾಯ ಸಂಘ ಸಹಭಾಗಿತ್ವದಲ್ಲಿ ಇಂದಬೆಟ್ಟು ಗ್ರಾಮದ ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಡಿ.2ರಂದು ಮನ್ವಿತ್‌ರ ಅಧ್ಯಕ್ಷತೆಯಲ್ಲಿ ಜರುಗಿತು. ವೇದಿಕೆಯಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷ ರಾಜೇಶ್ವರಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಸಿಆರ್ ಟಿ ತಾಲೂಕು ಸಂಯೋಜಕ ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಆಶಾಕಾರ್ಯಕರ್ತೆ ಚಂದ್ರಕಾಂತಿ ಗರ್ಭಿಣಿ , ಬಾಣಂತಿ, ಶಿಶುವಿನ ಆರೈಕೆ ಬಗ್ಗೆ ಮಾಹಿತಿ ನೀಡಿದರು.


ಸ್ತ್ರೀ ಶಕ್ತಿ, ಸ್ವಸಹಾಯ ಸಂಘದ ಸದಸ್ಯರು ಹಾಗೂ ಪೋಷಕರಿಗೆ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು. ಕೀರ್ತಿ ಪ್ರಶಾಂತ್ ಬಹುಮಾನ ನೀಡಿ ಸಹಕರಿಸಿದರು.
ರಾಜೇಶ್ವರಿ ತೆಂಗಿನಕಾಯಿ ಸುಲಿಯುವ ಯಂತ್ರ, ಕವಿತಾ ನೆಹರು ಹಾಗೂ ಗಾಂಧೀಜಿಯವರ ಫೋಟೋ ಇವುಗಳನ್ನು ಅಂಗನವಾಡಿಗೆ ಕೊಡುಗೆಯಾಗಿ ನೀಡಿದರು.
ಲತಾ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಸುಮತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಹಾಯಕಿ ಸುಮತಿ ಸಹಕರಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಪ್ರಗತಿ ಪರಿಶೀಲನ ತಂಡ ಭೇಟಿ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!