24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಡಿ.24 ರಿಂದ ಡಿ.28 ರವರೆಗೆ ವಿವಿಧ ವೈದಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದ್ದು ಈ ಪ್ರಯುಕ್ತ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರದಲ್ಲಿ ನಡೆಯುವ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಡಿ.4 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ, ನಿವೃತ್ತ ತಹಶೀಲ್ದಾರರು ಸೋಮೇ ಗೌಡ ವಹಿಸಿದ್ದರು.

ಚಪ್ಪರ ಮುಹೂರ್ತವನ್ನು ಅಳದಂಗಡಿ‌ ಶ್ರೀ‌ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ನೇರವೇರಿಸಿದರು, ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇರವೇರಿಸಿ ಶುಭಕೋರಿದರು.

ದೇವರ ಧ್ವನಿ ಸುರುಳಿ ಬಿಡುಗಡೆಯನ್ನು ವೇಣೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ ನೆರವೇರಿಸಿದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ,ಪ್ರಧಾನ ಕಾರ್ಯದರ್ಶಿ ರವಿರಾಜ ಗೌಡ ,ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಆನಂದ ಸಾಲಿಯಾನ್ ಓಡಿಮಾರ್,ಶ್ರೀ ಮಹಾಲಿಂಗೇಶ್ವರ ದೇಗುಲದ ಭಜನಾ ಮಂಡಳಿ ಅಧ್ಯಕ್ಷ ಸೋಮನಾಥ ಬಂಗೇರ, ಪಲ್ಗುಣಿ ಯುವತಿ ಮಂಡಲದ ಅಧ್ಯಕ್ಷೆ ಜಯಂತಿ ಉಪಸ್ಥಿತರಿದ್ದರು.

ಶಿರ್ಲಾಲು ಸಿಎ ಬ್ಯಾಂಕ್ ಸಿಬ್ಬಂದಿ ಶಶಿಯವರು ಪ್ರಾರ್ಥನೆ ಹಾಡಿದರು.
ವಿಶ್ವನಾಥ ಸಾಲಿಯಾನ್ ಪುದ್ದರಬೈಲು ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ.ಪಾರೆಂಕಿ ಸ್ವಾಗತಿಸಿದರು.ಊರ ಪರವೂರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

Related posts

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya
error: Content is protected !!