37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

ನಿಡ್ಲೆ : ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯಲ್ಲಿದ್ದ ಸೊತ್ತುಗಳನ್ನು ಕಿಡಿಗೇಡಿಗಳು ಡಿ.1ರಂದು ರಾತ್ರಿಯ ವೇಳೆ ಹಾನಿಗೊಳಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.


ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಜೀಜ್ ಎಂಬವರು ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು.


ಎಂದಿನಂತೆ ಶುಕ್ರವಾರ ರಾತ್ರಿಯ ವೇಳೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಜೀಜ್ ಶನಿವಾರ ಬೆಳಿಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ. ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

Related posts

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya
error: Content is protected !!