27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ(ರಿ) ಮೆಲ್ಕಾರು ಬಂಟ್ವಾಳ ಇದರ ದ್ವಿತೀಯ ವಾರ್ಷಿಕೋತ್ಸವವು ಶ್ರೀಮಹಾಗಣಪತಿ ಕ್ಷೇತ್ರ ಸೌತಡ್ಕದ ಶ್ರೀ ಗಣೇಶ ಸಭಾ ಭವನದಲ್ಲಿ ದಶಂಬರ 17 ಭಾನುವಾರ ಪೂರ್ವಾಹ್ನ 10 ಗಂಟೆಯಿಂದ ಜರಗಲಿದೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಗಣಪತಿ ಸನ್ನಿಧಿಯಲ್ಲಿ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯರ ಪ್ರಾರ್ಥನೆಯೊಂದಿಗೆ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ರಾವ್.ಎಂ ಬಿಡುಗಡೆಗೊಳಿಸಿದರು.

ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪುರಂದರ ಕಡೀರ ,ಪ್ರಶಾಂತ ಪೂವಾಜೆ, ವಿಠಲ ಕುರ್ತಿ, ಅರ್ಚಕರಾದ ಸುಬ್ರಹ್ಮಣ್ಯ ತೊಡ್ತಿಲ್ಲಾಯ, ಕಾರ್ಯನಿರ್ವಹಣಾಧಿಕಾರಿ ಕೆ .ವಿ.ಶ್ರೀನಿವಾಸ ,ಬಾಲಕೃಷ್ಣ ನೈಮಿಷ, ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಜಯರಾಮ ಭಂಡಾರಿ ಧರ್ಮಸ್ಥಳ, ಪುತ್ತೂರು ಘಟಕದ ಸಂಚಾಲಕ ಉಮೇಶ ಶೆಣೈ. ಎನ್ ಉಪ್ಪಿನಂಗಡಿ ,ಶ್ರೀಮತಿ ಶ್ರೀದೇವಿ ಭಟ್ ಕಯ್ಯೂರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಸ್ವಾಗತಿಸಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು.

Related posts

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya
error: Content is protected !!