32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: 2023 ಮಾರ್ಚ್ / ಏಪ್ರಿಲ್ ತಿಂಗಳಲ್ಲಿ ನಡೆದ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಮತ್ತು ದ್ವಿತೀಯ ಪಿ. ಯು. ಸಿ.ಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಗೌಡ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಡಿ.24, ರವಿವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಬಂಧಪಟ್ಟ ವಿದ್ಯಾರ್ಥಿಗಳು ವಾಣಿ ಪದವಿಪೂರ್ವ ಕಾಲೇಜಿನ ಕಛೇರಿಯಿಂದ ಅರ್ಜಿಗಳನ್ನು ಪಡೆದುಕೊಂಡು, ಎಲ್ಲಾ ಮಾಹಿತಿಗಳೊಂದಿಗೆ ಡಿ.18 ರೊಳಗಾಗಿ ಕಾಲೇಜು ಕಛೇರಿಯಲ್ಲಿ ಸಲ್ಲಿಸಲು ಕೋರಲಾಗಿದೆ.

ಅಲ್ಲದೇ ಸಾಂಸ್ಕೃತಿಕ /ಆಟೋಟ ಸ್ಪರ್ಧೆ ಗಳಲ್ಲಿ( ಸರ್ಕಾರಿ ಇಲಾಖೆ ಗಳ ಕಡೆಯಿಂದ ನಡೆದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರು) ಜಿಲ್ಲಾ ಮಟ್ಟಕ್ಕಿಂತ ಹೆಚ್ಚಿನ ಹಂತಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಕೂಡಾ ಅರ್ಜಿ ಸಲ್ಲಿಸಬಹುದು. ಡಿ. 18 ರ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರು ತಿಳಿಸಿದ್ದಾರೆ.

Related posts

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya
error: Content is protected !!