September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಕಾಲೇಜಿನ ಐಕ್ಯೂ ಎಸಿ ಘಟಕ, ಯುವ ರೆಡ್ ಕ್ರಾಸ್ ಘಟಕ, ರೋವರ್ಸ್- ರೆಂಜರ್ಸ್, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ರಿಬ್ಬನ್ ಕ್ಲಬ್ , ಹಳೆ ವಿದ್ಯಾರ್ಥಿ ಸಂಘ ಗಳು ದಕ್ಷಿಣ ಕನ್ನಡ ಜಿಲ್ಲಾ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತ ನಿಧಿ ಕೇಂದ್ರ ಮತ್ತು ವೆನ್ಲಾಕ್ ಆಸ್ಪತ್ರೆ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಡಿ.4 ರಂದು ಏರ್ಪಡಿಸಲಾಯಿತು.

ಶಿಬಿರವನ್ನು ಉದ್ಘಾಟಿಸಿದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತ ನಿಧಿ ಕೇಂದ್ರದ ಸಂಯೋಜಕ ಪ್ರವೀಣ್ ಕುಮಾರ್ ಭಕ್ತ ಮಾತನಾಡಿ ರಕ್ತ ನೀಡುವುದರಿಂದ ಆಗುವ ಉಪಯೋಗಗಳು ಮತ್ತು ಅದರಿಂದ ನೂರಾರು ಜೀವಗಳನ್ನು ಉಳಿಸಬಹುದು ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾ ಸಂದೇಶವನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಘವ ಎನ್. ಇವರು ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಸುಬ್ರಹ್ಮಣ್ಯ ಕೆ., ರಾಷ್ಟ್ರೀಯ ಸೇವಾ ಯೋಜನೆ ಘಟಕ ಅಧಿಕಾರಿಗಳಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯ ಹಾಗೂ ಪ್ರೊ. ಕವಿತಾ, ರೇಂಜರ್ ಲೀಡರ್ ಪ್ರೊ. ರಾಜೇಶ್ವರಿ ಉಪಸ್ಥಿತರಿದ್ದರು. ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ರವಿ ಎಂ ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದರಿ ರಕ್ತದಾನ ಶಿಬಿರದಲ್ಲಿ ದಾಖಲೆ ಮಟ್ಟದಲ್ಲಿ 70 ರಕ್ತದಾನಿಗಳು ರಕ್ತ ನೀಡಿದರು.

Related posts

ನಾವೂರು ನವೋದಯ ಯುವಕ ಮಂಡಲ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿಗಳಿಗೆ “ಅಕ್ಷರ ದೀವಿಗೆ” ಹಾಗೂ ಶಿಕ್ಷಕರಿಗೆ ಗೌರವ

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya
error: Content is protected !!