30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

ಮಡಂತ್ಯಾರು: ವಿದ್ಯಾರ್ಥಿಗಳಿಂದು ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ಇವುಗಳನ್ನು ಬದಿಗಿಟ್ಟು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ಉತ್ತಮ ದೈಹಿಕ ಹಾಗು ಮಾನಸಿಕ ಆರೋಗ್ಯವನ್ನು ಪಡೆಯಲು ಸಾಧ್ಯ.ದೈಹಿಕ ವ್ಯಾಯಾಮದಿಂದ ಸದೃಢರಾಗಲು ಸಹಕಾರಿ ಎಂದು ಅಂತಾರಾಷ್ಟ್ರೀಯ ದೇಹದಾರ್ಢ್ಯ ಕ್ರೀಡಾಪಟು ಏಕಲವ್ಯ ಪ್ರಶಸ್ತಿ ವಿಜೇತ ರೋಶನ್ ಫೆರಾವೊ ಹೇಳಿದರು .


ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ 41ನೇ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಸವಾಲುಗಳನ್ನು ಎದುರಿಸಿ ಮುನ್ನುಗ್ಗಲು ವಿದ್ಯಾರ್ಥಿ ಜೀವನದ ಆಟೋಟ ಸ್ಪರ್ಧೆಗಳು ಅತೀ ಪ್ರಮುಖವಾದದ್ದು, ವಿದ್ಯಾರ್ಥಿಗಳು ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.


ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ| ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿದ್ದರು. ಅಂತಾರಾಷ್ಟ್ರೀಯ ಕ್ರೀಡಾಪಟು, ಏಕಲವ್ಯ ಪ್ರಶಸ್ತಿ ವಿಜೇತೆ ಸಿಲ್ವೇನಿಯಾ ಪಾಯ್ಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.

ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೋರಸ್ , ಕಾಲೇಜು ಹಾಗೂ ಪ್ರೌಢ ಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಲಿಯೋ ರೋಡ್ರಿಗಸ್, ವಿನೋದ್ ರಾಕೇಶ್ ಡಿಸೋಜ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಶೇಖರ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ರೋಶನ್ ಫೆರಾವೊ ಹಾಗೂ ಸಿಲ್ವೇನಿಯಾ ಪಾಯ್ಸ್ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೊಮ್ ಡಿಸೋಜ ಸ್ವಾಗತಿಸಿ, ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್ ವಂದಿಸಿದರು. ಕ್ರೀಡಾ ಕಾರ್ಯದರ್ಶಿಮುರಳಿ ಕೃಷ್ಣ ಪ್ರತಿಜ್ಞಾ ವಿಧಿ ಬೋಧಿಸಿದರು. ಉಪನ್ಯಾಸಕ ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!