March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

ಬೆಳ್ತಂಗಡಿ: ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಇಂದು ಸಂಸ್ಥಾಪಕರ ದಿನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಸೇವೆ ಮತ್ತು ಸಂತೃಪ್ತಿಯಲ್ಲಿ ಮನೆಮಾತಾಗಿದೆ.

ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್‌ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಾಗುವುದು. ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ.

ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವ್ರರಿಸಲು ನಾವು ಬಧ್ಡರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್‌ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.

Related posts

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya
error: Content is protected !!