September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

ಕುತ್ಲೂರು : ಕರ್ನಾಟಕ ಅರಣ್ಯ ಇಲಾಖೆ, ಕುಂದಾಪುರ ವಿಭಾಗ ಮೂಡಬಿದ್ರೆ ಉಪವಿಭಾಗ, ಕುತ್ಲೂರು ಗ್ರಾಮ ಅರಣ್ಯ ಸಮಿತಿ ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.4 ರಂದು ಮಂಜುಶ್ರೀ ಸಭಾಭವನ ಕುತ್ಲೂರಿನಲ್ಲಿ ಸಮಿತಿಯ ಅಧ್ಯಕ್ಷ ಶ್ರೀಧರ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗಿತು.


ವೇದಿಕೆಯಲ್ಲಿ ಕಾರ್ಯಕ್ರಮಗಳ ತಾಲೂಕು ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಮಾತನಾಡಿ ಸಂಜೀವಿನಿ ಮುಖಾಂತರ ಸ್ವಸಹಾಯ ಸಂಘಗಳಿಗೆ ಬರುವ ಅನುದಾನಗಳ ಸಂಕ್ಷಿಪ್ತ ಮಾಹಿತಿಯನ್ನುನೀಡಿದರು.

ಗ್ರಾಮ ಅರಣ್ಯ ಸಮಿತಿಯ ಸದಸ್ಯ ಕಾರ್ಯದರ್ಶಿ ಕುಶಾಲಪ್ಪ ಗೌಡ, ನಾರಾವಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಲತಾ, ಪಂಚಾಯತ್ ಸದಸ್ಯ ಸಂತೋಷ, ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಶ್ರೀಮತಿ ರಾಜಶ್ರೀ, ಹಾಗೂ ಅಂಡಿಂಜೆ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರು ಉಪಸ್ಥಿತರಿದ್ದರು.

ಸಭೆಯಲ್ಲಿ ಮಂಗಗಳ ಹಾಗೂ ಕಾಡುಹಂದಿಯ ಹಾವಳಿಯ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಅರಣ್ಯ ಸಮಿತಿ ಸದಸ್ಯ ಕೇಶವ ಕಾರ್ಯಕ್ರಮ ನಿರೂಪಿಸಿ, ರೋಹನ್ ಸ್ವಾಗತಿಸಿ, ಆನಂದ ಸಾಲ್ಯಾನ್ ವಂದನಾರ್ಪಣೆಗೈದರು.

Related posts

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!