ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯಿತಿನ 2022-23 ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿಮಲಾ ಇವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಜಮಾಬಂಧಿ ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಡಾ. ಆನಂದ್ ಐ.ಎ.ಎಸ್., ಮುಖ್ಯಕಾರ್ಯನಿರ್ವಹಣಾಧಿಕಾರಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ನೆರವೇರಿಸಿಕೊಟ್ಟರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪಿ.ಶ್ರೀನಿವಾಸ್ ರಾವ್ ಗ್ರಾಮದ ಅಭಿವೃದ್ಧಿ ಬಗ್ಗೆ ಕೈಗೊಂಡ ಕಾರ್ಯಕ್ರಮದ ಬಗ್ಗೆ ಸಭೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಧಿಕಾರಿ ಕುಸುಮಾಧರ, ಮಂಗಳೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಮಹೇಶ್, ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಅಭಿಯಂತರು ಹರ್ಷಿತ್, ನರೇಗಾ ಇಂಜಿನಿಯರ್ ಗೌತಮ್, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು, ಗ್ರಾಮ ಪಂಚಾಯತ ಸಿಬ್ಬಂದಿ ವರ್ಗ, ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಂಜೀವಿನಿ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಪಂಚಾಯತ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮ್ ಪಂಚಾಯ್ತಿ ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಲ್ಮ ಜಮಾ ಬಂದಿ ವರದಿ ಮಂಡನೆ ಮಾಡಿದರು. ಗ್ರಾಮ ಪಂಚಾಯತಿ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ ಜಮಾ ಖರ್ಚು ವಿವರಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ರಾಮದ ಅಭಿವೃದ್ಧಿ ಬಗ್ಗೆ ಸೂಕ್ತ ಸಲಹೆ ಸೂಚನೆ ನೀಡಿದರು. ಪಂಚಾಯತಿ ಕಾರ್ಯದರ್ಶಿ ದಿನೇಶ್ ಎಮ್ ಧನ್ಯವಾದ ನೀಡಿದರು.