38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಇದರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ಹಾಗೂ ವೇದಿಕೆಯ ಯಶಸ್ವಿಯಾಗಿ ಯಾವುದೇ ಫಲಾಪೇಕ್ಷೆಯಿಲ್ಲದೆ ಶ್ರಮಿಸುತ್ತಿರುವ ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ ಡಿ.7ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು.

ಕಲ್ಬುರ್ಗಿ ಜಿಲ್ಲೆಯ ಅಪ್ಜಲಪುರದ ಶ್ರೀ ಮಳೇಂದ್ರ ಸಂಸ್ಥಾನ ಹಿರೇಮಠದ ಶ್ರೀ ಷ.ಬ್ರ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಹಾಗೂ ಒಪ್ಪತ್ತೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಡಾ.ಹೇಮಾವತಿ ವಿ.ಹೆಗ್ಗಡೆಯವರು ನೆರವೇರಿಸಿದರು.

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಹೆಚ್ ಮಂಜುನಾಥ್ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರಧಾನ ಮಾಡಿದರು.

ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಟ್ರಸ್ಟಿಗಳಾದ ಶ್ರೀಮತಿ ಶ್ರದ್ಧಾ ಅಮಿತ್‌
ಜನಜಾಗೃತಿ ಸಾಧಕರನ್ನು ಗೌರವಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಟ್ರಸ್ಟಿಗಳಾದ ವಿ.ರಾಮಸ್ವಾಮಿ ಗುರುತಿನ ಚೀಟಿ ವಿತರಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಹೊನ್ನವಳ್ಳಿ ಪ್ರಮಾಣಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಟ್ರಸ್ಟಿಗಳಾದ ಪಿ.ವಿ ಭಂಡಾರಿ, ಶ್ರೀನಿವಾಸ್ ಭಟ್, ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ ಪಾಯಸ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜಾಧ್ಯಕ್ಷ ರಾಜಣ್ಣ ಮೂ. ಕೊರವಿ ಉಪಸ್ಥಿತರಿದ್ದರು.

Related posts

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya
error: Content is protected !!