ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಯೋಗೀಶ್ ಮತ್ತು ಆತನ ಮಗ ಜೀವನ್‌ ಎಂಬವರಿಗೆ‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ರೂ 3,00,000/- ದಂಡ , ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ನ್ಯಾಯಾಲಯವು ಆದೇಶಿಸಿದೆ.

2020 ಫೆ 02 ರಂದು ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 13/2020 ಕಲಂ: 504,302, ಜೊತೆಗೆ 34 ಐ.ಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಾದ ಲಾಯಿಲ ಗ್ರಾಮದ ನಿವಾಸಿ ಯೋಗೀಶ್ (51) ಮತ್ತು ಆತನ ಮಗ ಜೀವನ್‌ ಎಂಬವರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಕೆಯಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಡಿ.06 ರಂದು ಅಪರಾಧಿ ಯೋಗೀಶನಿಗೆ ಕಲಂ: 302 ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ರೂ. 3 ಲಕ್ಷ ದಂಡ ವಿಧಿಸಿ ಆದೇಶ ಮಾಡಿದ್ದು, ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿ 6 ತಿಂಗಳ ಸಾದಾ ಶಿಕ್ಷೆ ವಿಧಿಸಲಾಗಿರುತ್ತದೆ.

ಪ್ರಕರಣದ ತನಿಖಾಧಿಕಾರಿಯಾಗಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಸಂದೇಶ್‌ ಪಿ ಜಿ ರವರು ಹಾಗೂ ತನಿಖಾ ಸಹಾಯಕರಾಗಿ ಎ ಎಸ್‌ ಐ ವೆಂಕಟೇಶ್‌ ರವರು ಕಾರ್ಯನಿರ್ವಹಿಸಿರುತ್ತಾರೆ. ನ್ಯಾಯಾಲಯ ಕರ್ತವ್ಯದಲ್ಲಿ ಪೊಲೀಸ್‌ ಕಾನ್ಸ್‌ ಟೇಬಲ್‌ ಜಗದೀಶ್‌ ರವರು ಸಹಕರಿಸಿರುತ್ತಾರೆ. ಸರಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ್‌ ರವರು ನ್ಯಾಯಾಲಯದಲ್ಲಿ ವಾದಿಸಿರುತ್ತಾರೆ.

Leave a Comment

error: Content is protected !!