April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

ಕುತ್ಲೂರು: ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಅಂಗಳ ಕಾರ್ಯಕ್ರಮವನ್ನು ಇತ್ತೀಚೆಗೆ ಶಾಸಕ ಹರೀಶ್ ಪೂಂಜ ರವರು ಉದ್ಘಾಟಿಸಿದರು.

ಅವರು ಕುತ್ಲೂರು ಉನ್ನತೀಕರಿಸಿದ ಶಾಲೆಯ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 100 ದಾಟಿದರೆ ಮುಂದಿನ ಹಂತದಲ್ಲಿ ಎಲ್ ಕೆ ಜಿ,ಯು ಕೆ ಜಿ ವಿಭಾಗವನ್ನು ಆರಂಭಿಸುವ ಬಗ್ಗೆ ಶಾಸಕ ಹರೀಶ್ ಪೂಂಜ ಭರವಸೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ನಾರಾವಿ ಗ್ರಾ.ಪಂ. ಅಧ್ಯಕ್ಷ ರಾಜವರ್ಮ ಜೈನ್ ಅಧ್ಯಕ್ಷ ತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೂಕ್ರಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ತಂಗಡಿ ನೋಟರಿ ವಕೀಲರು ಮುರಳಿ ಬಿ, ಬೆಳ್ತಂಗಡಿ ಶ್ರೀ ಮಹಾವೀರ ಎಂಟರ್ ಪ್ರೈಸಸ್ ಖ್ಯಾತ ಉದ್ಯಮಿ ಶಮಂತ್ ಕುಮಾರ್ ಜೈನ್, ರಾಜೇಂದ್ರ ಕುಮಾರ್ ಬೆಂಗಳೂರು, ನಾರಾವಿ ಗ್ರಾ.ಪಂ. ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು , ಶಾಲಾ ವಾರ್ಷಿಕೋತ್ಸವ ಸಮಿತಿ ಗೌರವಾಧ್ಯಕ್ಷರಾದ ಶಶಿಕಾಂತ ಆರಿಗ , ಡಿಕಯ್ಯ ಪೂಜಾರಿ , ಸಿ ಆರ್ ಪಿ ಸಂಪನ್ಮೂಲ ವ್ಯಕ್ತಿ ಕಿರಣ್ ಕುಮಾರ್, ನಾರಾವಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರಾ, ನಾರಾವಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಆಶಾಲತಾ , ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ನಿಮಿತ್ ಕುಮಾರ್ ಜೈನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ರಾಮಚಂದ್ರ ಭಟ್ ಅವರನ್ನು ವಿದ್ಯಾಭಿಮಾನಿಗಳು ಹಾಗೂ ಶಾಸಕರು ಶಾಲು ಫಲಪುಷ್ಪ ಸನ್ಮಾನ ಪತ್ರ ಹಾರ ಹಾಕಿ ಸನ್ಮಾನಿಸಿದರು. ಸುಮಾರು 15 ಶಾಲಾ ಅಭಿವೃದ್ಧಿಯ ದಾನಿಗಳಿಗೆ ಸನ್ಮಾನಿಸಲಾಯಿತು.

ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೂಪಲತಾ ವರದಿ ವಾಚಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಕೆ. ರಾಮಚಂದ್ರ ಭಟ್ ಕುಕ್ಕುಜೆ ಸ್ವಾಗತಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ಶಾಲಾ ಮಕ್ಕಳಿಗೆ ಬಹುಮಾನ ವಿತರಣೆ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿ ಸಂಘದಿಂದ ವಠಾರ ನಾಟಕ ನಡೆಯಿತು.

ಉಪಾಹಾರ ಮತ್ತು ಭೋಜನದ ವ್ಯವಸ್ಥೆಯನ್ನು ಕುತ್ಲೂರು ಗ್ರಾಮದ ಮಂಜುಶ್ರೀ ನಗರ ದಿನೇಶ್ ದೇವಾಡಿಗ ನಡೆಸಿಕೊಟ್ಟರು. ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿದರು. ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸುಜಯ ಹೆಗ್ಡೆ ಪಾರೊಟ್ಟು ಧನ್ಯವಾದವಿತ್ತರು,

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!