ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 11ನೇ ವರ್ಷದ ಪಾದಯಾತ್ರೆ ಡಿ.8 ರಂದು ಜರುಗಿತು.
ತಾಲೂಕಿನ 81 ಗ್ರಾಮಗಳಿಂದ ಬೃಹತ್ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದರು.
ಶ್ರೀ ಮಂಜುನಾಥ ಸ್ವಾಮಿಯ ಭಾವಚಿತ್ರವುಳ್ಳ ಟ್ಯಾಬ್ಲೋ, ವಿವಿಧ ಯಕ್ಷಗಾನ ವೇಷ ಭೂಷಣಗಳು, ಭಜನಾ ತಂಡಗಳು, ಗ್ರಾಮಾಭಿವೃದ್ಧಿ ಯೋಜನೆಯ 16 ವಲಯಗಳಿಂದ ಬಂದ ಕಾರ್ಯಕರ್ತರು, ವಿಪತ್ತು ನಿರ್ವಹಣಾ ತಂಡ, ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡ, ವಿವಿಧ ಸಂಘ ಸಂಸ್ಥೆಯವರು ಪಾದಯಾತ್ರೆಯಲ್ಲಿ ಶಿಸ್ತಿನಿಂದ ಭಾಗವಹಿಸಿದರು. ಚೆಂಡೆ, ವಾದ್ಯ, ಸಮವಸ್ತ್ರಧಾರಿ ಭಕ್ತರು, ಯಕ್ಷಗಾನ ವೇಷಧಾರಿಗಳು,ಭಜನಾ ತಂಡಗಳ ಕುಣಿತ ಭಜನೆ ಪಾದಯಾತ್ರೆಯ ವಿಶೇಷ ಆಕರ್ಷಣೆಯಾಗಿತ್ತು.
ಉಜಿರೆ ದೇವಸ್ಥಾನದ ವಠಾರದಲ್ಲಿ ಮಧ್ಯಾಹ್ನ ಶ್ರೀ ಭಗವಾನ್ ಶಿರಡಿಸಾಯಿ ಸತ್ಯಸಾಯಿ ಸೇವಾ ಕ್ಷೇತ್ರ ಹಳೆಕೋಟೆ ಬೆಳ್ತಂಗಡಿ ಇವರಿಂದ ಭಜನಾ ಸಂಕಿರ್ತನೆ ನಡೆಯಿತು. ಬಳಿಕ ಧಮ೯ಸ್ಥಳದ ಶ್ರದ್ಧಾ ಅಮಿತ್ ದೀಪ ಪ್ರಜ್ವಲಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.
ಶ್ರೀ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಎಸ್.ಡಿ.ಎಂ ಟ್ರಸ್ಟ್ ಕಾರ್ಯದರ್ಶಿ ಸತೀಶ್ಚಂದ್ರ ಸುಯ೯, ಡಾ. ಎಂ.ಎಂ ದಯಾಕರ್ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಲಯನ್ಸ್ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಅರವಿಂದ್ ಭಟ್ ಕೊಯ್ಯೂರು, ನ್ಯಾಯವಾದಿ ಧನಂಜಯ್ ರಾವ್, ಅಖಿಲ ಕರ್ನಾಟಕ ಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ಮಾಜಿ ಅಧ್ಯಕ್ಷೆ ಶಾರದಾ ಆರ್.ರೈ, ಕೆ.ಎನ್ ಜನಾರ್ದನ್, ಉದ್ಯಮಿ ಮೋಹನ ಶೆಟ್ಟಿಗಾರ್, ಬಿಜೆಪಿ ಅಧ್ಯಕ್ಷ ಜಯಂತ್ ಕೊಟ್ಯಾನ್, ಧರಣೇಂದ್ರ ಕುಮಾರ್, ಪ್ರಭಾಕರ ಪೊಸಂದೋಡಿ, ಬಾಲಕೃಷ್ಣ ಶೆಟ್ಟಿ ಸಾಲಿಗ್ರಾಮ, ಉದ್ಯಮಿ ರಾಘವೇಂದ್ರ ಬೈಪಾಡಿತ್ತಾಯ, ವಿವೇಕ್ ವಿನ್ಸೆಂಟ್ ಪಾಯಿಸ್, ಮಮತಾ ಎಂ. ಶೆಟ್ಟಿ, ರಾಜಶೇಖರ ಅಜ್ರಿ, ಶ್ಯಾಮ್ ಸುಂದರ್ ನಡ, ಶಶಿಧರ ಕಲ್ಮಂಜ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ| ಶ್ರೀನಾಥ್, ನ್ಯಾಯವಾದಿ ಧನಂಜಯ ರಾವ್, ಅಡೂರು ವೆಂಕಟ್ರಾವ್, ಜಯಂತ್ ಶೆಟ್ಟಿ, ಲೋಕೇಶ್ವರಿ ವಿನಯಚಂದ್ರ, ತಿಮ್ಮಪ್ಪ ಗೌಡ ಬೆಳಾಲು, ಪುಷ್ಪರಾಜ ಹೆಗ್ಡೆ, ವಸಂತ ಮಜಲು, ಉಜಿರೆ ಗ್ರಾ.ಪಂ ಅಧ್ಯಕ್ಷೆ ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ವಿಠಲ ಶೆಟ್ಟಿ ಲಾಯಿಲ, ಶಂಕರ ಹೇಡ್ಯ, ಯೋಗೀಶ್ ಕುಮಾರ್ ನಡಕ್ಕರ, ಗಿರೀಶ್ ವೇಣೂರು,
ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರುಗಳಾದ ವಸಂತ ಸಾಲ್ಯಾನ್, ಪಿ.ಕೆ ರಾಜು ಪೂಜಾರಿ ಕಾಶಿಪಟ್ಣ, ಡಿ.ಎ ರಹಿಮಾನ್, ತಿಮ್ಮಪ್ಪ ಗೌಡ, ಕಿಶೋರ್ ಹೆಗ್ಡೆ, ರತ್ನವರ್ಮ ಬುಣ್ಣು, ಈಶ್ವರ ಭೈರ, ದುಗ್ಗೇಗೌಡ, ತಾಲೂಕು ಯೋಜನಾಧಿಕಾರಿಗಳು, ತಾಲೂಕಿನ ಗಣ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 15 ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ನಾಗರಿಕರು, ಹೆಗ್ಗಡೆ ಅಭಿಮಾನಿಗಳು ಮೆರವಣಿಗೆಯ ಜೊತೆ ಸಾಗಿದರು.
ಆಕರ್ಷಣೆಗಳಿಸಿದ ಪಾದಯಾತ್ರೆ:
ಉಜಿರೆ ರಥಬೀದಿಯಿಂದ ಧರ್ಮಸ್ಥಳ ತನಕ ನಡೆದ ಪಾದಯಾತ್ರೆಯಲ್ಲಿ ಮುಂಚೂಣಿಯಲ್ಲಿ ಭಜನಾ ತಂಡಗಳು, ಚೆಂಡೆ, ಕೊಂಬು, ಕಹಳೆ, ವಿವಿಧ ವೇಷ, ಭೂಷಣಗಳ ತಂಡಗಳು ತಾಲೂಕಿನ ವಿವಿಧ ಭಜನಾ ಮಂಡಳಗಳ ತಂಡ ಮೆರವಣಿಗೆ ಜೊತೆ ಸಾಗಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ತಂಡಗಳು, ಕ್ಷೇತ್ರದ ಸಿಬ್ಬಂದಿಗಳು, ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ನಾಗರಿಕರು ಮೆರವಣಿಗೆಯುದ್ದಕ್ಕೂ ಸಾಗಿದರು.