38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

ರೆಖ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ ರೆಖ್ಯ ಘಟಕದ ನೇತೃತ್ವದಲ್ಲಿ ಡಿ. 30 ರಂದು ಸಂಜೆ 4.00 ಗಂಟೆಯಿಂದ ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ವ್ರತ ಕಲ್ಪೊಕ್ತ ಪೂಜೆ ಬ್ರಹ್ಮಶ್ರೀ ಪುರೋಹಿತ ನಾಗರಾಜ್ ಭಟ್ ಸುಳ್ಯ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಸಂಜೆ 7.00 ಗಂಟೆಯಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಭಾಷಣಗಾರರಾಗಿ ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ ರವರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಮತ್ತು ಬಜರಂಗದಳ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ರಘು ಸಕಲೇಶಪುರ ಅವರು ಭಾಗವಹಿಸಲಿದ್ದಾರೆ. ಬಜರಂಗದಳ ಜಿಲ್ಲಾ, ಮತ್ತು ತಾಲೂಕು ಮುಖಂಡರುಗಳು ಹಾಗೂ ಸಂಘ ಪಾರಿವಾರದ ಎಲ್ಲಾ ಕಾರ್ಯಕರ್ತರು, ಸಮಸ್ತ ಹಿಂದೂ ಭಾಂದವರು ಭಾಗವಹಿಸಲಿದ್ದಾರೆ.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಕಡಿರುದ್ಯಾವರ ಗ್ರಾ.ಪಂ. ಗ್ರಾಮ ಸಭೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!