38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

ಬೆಳಾಲು:ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮವು ಡಿ.10 ರಂದು ಬೆಳಾಲು ಪೆರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉಜಿರೆ ಶ್ರೀ ಧ.ಮಂ. ಕಾಲೇಜು ಪ್ರಾಂಶುಪಾಲರು ಡಾ. ಬಿ.ಎ ಕುಮಾರ ಹೆಗ್ಡೆ ಉದ್ಘಾಟಿಸಿದರು. ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಚಾಲಕ ಕೆ.ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಶಾಲೆಯ ಮೇಲ್ಚಾವಣಿಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಮಾತನಾಡಿ ಶಾಲೆಯ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ರೂ 10 ಲಕ್ಷ ಹೆಚ್ಚುವರಿ ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದರು. ಶಾಸಕರನ್ನು ಶಾಲೆಯ ವತಿಯಿಂದ ಗೌರವಿಸಿ,ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳಾಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಬೆಳಾಲು ಮೀನಂದೇಲು ಸ್ಟೋರ್ ಮಾಲಕ ಜಯಣ್ಣ ಮೀನಂದೇಲು, ಬೆಳ್ತಂಗಡಿ ವಕೀಲರು ಬಿ.ಕೆ ಧನಂಜಯ್ ರಾವ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೊ| ಅನಂತ ಭಟ್ ಮಚ್ಚಿಮಲೆ, ಜಿ‌.ಪಂಮಾಜಿ ಸದಸ್ಯ ಕೊರಗಪ್ಪ ನಾಯ್ಕ್,ಸಿ.ಆರ್.ಪಿ ಪ್ರತಿಮಾ,ಬೆಲಾಲು ಗ್ರಾ.ಪಂ ಸದಸ್ಯರಾದ ಸುರೇಂದ್ರ ಗೌಡ ಸುರುಳಿ,ಸತೀಶ್ ಸತೀಶ್ ಗೌಡ ಎಳ್ಳುಗದ್ದೆ,ಕೃಷ್ಣಯ್ಯ ಆಚಾರ್ಯ,ಶ್ರೀಮತಿ ಯಶೋಧ,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಂತೋಷ್ ಮಡಿವಾಳ, ಶಾಲಾ ನಾಯಕ ಹೇಮಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು.ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಸ್ವಾಗತಿಸಿದರು. ಯೋಜನೆಯ ಅಧಿಕಾರಿ ಗಿರೀಶ್, ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya
error: Content is protected !!