April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಇಲ್ಲಿ ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ,ನೇಮೋತ್ಸವ ಕಾರ್ಯಕ್ರಮಗಳು ಡಿ. 28-31 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರು ಶಿವಗಿರಿ ನಿವಾಸ ಕಾಪಿನಡ್ಕದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಇದರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್, ಕೋಶಾಧಿಕಾರಿ ಪ್ರವೀಣ್ ಕುಮಾರ್ ಜಹೆಚ್.ಎಸ್,ಹಿರಿಯರಾದ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟು, ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ,ಕಲಶಾಭಿಷೇಕ ಸಮಿತಿ ಕಾರ್ಯದರ್ಶಿ ಗಣೇಶ್ ಪೂಜಾರಿ ಬೊಂಟ್ರೋಟ್ಟು, ಸದಾನಂದ ಪೂಜಾರಿ ಬೊಂಟ್ರೋಟ್ಟು, ಯುವ ನಾಯಕ ಸಂತೋಷ್ ಕುಮಾರ್ ಕಾಪಿನಡ್ಕ,ಹರೀಶ್ ರೈ ಬಳಂಜ, ನಿತ್ಯಾನಂದ ಹೆಗ್ಡೆ,ಪ್ರಸನ್ನ ಕುಮಾರ್,ಅಖಿಲ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!