ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರು ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್‌ನ ಸ್ಥಾಪಕರು ಹಾಗೂ ವಿದ್ವಾಂಸರಾದ ಡಾ. ಗುರುರಾಜ ಕರ್ಜಗಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಸಿದ್ಧಗಂಗಾ ಮಠ ತುಮಕೂರಿನ ಪೀಠಾಧಿಪತಿಗಳಾದ ಶ್ರೀ ಸಿದ್ಧಲಿಂಗ ಸ್ವಾಮಿಗಳು ವಹಿಸಿದ್ದರು.
ಭಾರತ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿಗಳು, ಲೇಖಕರಾದ ಡಾ. ಎಂ. ಆರ್ ವೆಂಕಟೇಶ್, ವಿಭು ಅಕಾಡೆಮಿ ಬೆಂಗಳೂರಿನ ಸಂಸ್ಥಾಪಕ ಮುಖ್ಯಸ್ಥರಾದ ಡಾ. ವಿ.ಬಿ ಆರತಿ, ಬಸವಶಾಂತಿ ಪ್ರಶಸ್ತಿ ಪುರಸ್ಕೃತ ವಾಗ್ಮಿ ಮಹ್ಮದಗೌಸ ರ. ಹವಾಲ್ದಾರ ಉಪನ್ಯಾಸ ನೀಡಿದರು.
ಉಪನ್ಯಾಸಕ ಸುನೀಲ್ ಪಂಡಿತ್, ಶ್ರೀಮತಿ ಶ್ರದ್ಧಾ ಅಮಿತ್ ಸನ್ಮಾನ ಪತ್ರ ವಾಚಿಸಿದರು. ಭೈರವೇಶ್ವರ ಪುರಾಣ ಗ್ರಂಥವನ್ನು ಸ್ವಾಮೀಜಿ ಲೋಕಾರ್ಪಣೆ ಮಾಡಿದರು. ಡಿ. ಸುರೇಂದ್ರ ಕುಮಾರ್ ಉಪನ್ಯಾಸಕರನ್ನು ಸನ್ಮಾನಿಸಿದರು.
ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ವಂದಿಸಿದರು. ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.
ರಾತ್ರಿ ಶ್ರೀಮತಿ ಅನುರಾಧಾ ವಿಕ್ರಾಂತ್ ಮತ್ತು ದೃಷ್ಟಿ ನೃತ್ಯ ಮೇಳ ಬೆಂಗಳೂರು ಇವರಿಂದ ನೃತ್ಯ ಸಮರ್ಪಣಂ ಕಾರ್ಯಕ್ರಮ ನಡೆಯಲಿದೆ.