April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

ಸುಲ್ಕೇರಿ: ಶ್ರೀ ಮಹಾಮಾಯಿ ಸಭಾಭವನ ಭಂಡಾರಿಗೋಳಿ ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮವು ಡಿ.9 ರಂದು ನಡೆಯಿತು.

ಸಮಾರಂಭದಲ್ಲಿ ಅಂಗನವಾಡಿ ಸಹಾಯಕಿ ಶ್ರೀಮತಿ ಸುಂದರಿಯವರನ್ನು ಸನ್ಮಾನಿಸಲಾಯಿತು.

ಶಾಲಾ ಮಕ್ಕಳಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ಬಹುಮಾನ ಹಾಗೂ ನಾಲ್ಕು ಮಂದಿ ಬಡವರಿಗೆ ಅಕ್ಕಿ ವಿತರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ರವಿ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರಾಂತೀಯ ಅಧ್ಯಕ್ಷರಾದ ಹೆರಾಲ್ಡ್ ತಾವ್ರೊ ವಲಯ ಅಧ್ಯಕ್ಷರಾದ ಎಂ ಕೆ ದಿನೇಶ್ ಹಾಗೂ ವಿವಿಧ ಕ್ಲಬ್ ಅಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ, ಜೊಸ್ಸಿ ಮೆನೇಜಸ್ ರೋಷನ್ ಹಾಗೂ ನಿರಂಜನ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ವಲಯ 2 ಅಧ್ಯಕ್ಷರಾದ ಶ್ರೀಮತಿ ಪ್ರತಿಭಾ ಹೆಬ್ಬಾರ್, ಸುಲ್ಕೇರಿ ಕ್ಲಬ್ ನ ಸ್ಥಾಪಕ ಅಧ್ಯಕ್ಷರಾದ ಲಯನ್ ಸುಂದರ ಶೆಟ್ಟಿ, ಕೋಶಾಧಿಕಾರಿ ಹರೀಶ್ ಪೂಜಾರಿ ಹಾಗೂ ಕಾರ್ಯದರ್ಶಿ ಸುರೇಶ್ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಲಯನ್ ವಿಶ್ವನಾಥ ಶೆಟ್ಟಿ ಹಾಗೂ ಲಯನ್ ಕೆ ವಸಂತ ರಾವ್ ನೆರವೇರಿಸಿದರು.

Related posts

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya
error: Content is protected !!