24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರು ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್‌ನ ಸ್ಥಾಪಕರು ಹಾಗೂ ವಿದ್ವಾಂಸರಾದ ಡಾ. ಗುರುರಾಜ ಕರ್ಜಗಿ ಉದ್ಘಾಟಿಸಿದರು.


ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಸಿದ್ಧಗಂಗಾ ಮಠ ತುಮಕೂರಿನ ಪೀಠಾಧಿಪತಿಗಳಾದ ಶ್ರೀ ಸಿದ್ಧಲಿಂಗ ಸ್ವಾಮಿಗಳು ವಹಿಸಿದ್ದರು.
ಭಾರತ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿಗಳು, ಲೇಖಕರಾದ ಡಾ. ಎಂ. ಆರ್ ವೆಂಕಟೇಶ್, ವಿಭು ಅಕಾಡೆಮಿ ಬೆಂಗಳೂರಿನ ಸಂಸ್ಥಾಪಕ ಮುಖ್ಯಸ್ಥರಾದ ಡಾ. ವಿ.ಬಿ ಆರತಿ, ಬಸವಶಾಂತಿ ಪ್ರಶಸ್ತಿ ಪುರಸ್ಕೃತ ವಾಗ್ಮಿ ಮಹ್ಮದಗೌಸ ರ. ಹವಾಲ್ದಾರ ಉಪನ್ಯಾಸ ನೀಡಿದರು.

ಉಪನ್ಯಾಸಕ ಸುನೀಲ್ ಪಂಡಿತ್, ಶ್ರೀಮತಿ ಶ್ರದ್ಧಾ ಅಮಿತ್ ಸನ್ಮಾನ ಪತ್ರ ವಾಚಿಸಿದರು. ಭೈರವೇಶ್ವರ ಪುರಾಣ ಗ್ರಂಥವನ್ನು ಸ್ವಾಮೀಜಿ ಲೋಕಾರ್ಪಣೆ ಮಾಡಿದರು. ಡಿ. ಸುರೇಂದ್ರ ಕುಮಾರ್ ಉಪನ್ಯಾಸಕರನ್ನು ಸನ್ಮಾನಿಸಿದರು.

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ವಂದಿಸಿದರು. ಉಪನ್ಯಾಸಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.


ರಾತ್ರಿ ಶ್ರೀಮತಿ ಅನುರಾಧಾ ವಿಕ್ರಾಂತ್ ಮತ್ತು ದೃಷ್ಟಿ ನೃತ್ಯ ಮೇಳ ಬೆಂಗಳೂರು ಇವರಿಂದ ನೃತ್ಯ ಸಮರ್ಪಣಂ ಕಾರ್ಯಕ್ರಮ ನಡೆಯಲಿದೆ.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya
error: Content is protected !!