26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ, ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಕ್ರಿಸ್ ಮಸ್ ಆಚರಣೆಯು ಡಿ.12 ರಂದು ವಕೀಲರ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವರಾಜು ಎಚ್. ಎಮ್. ಬೆಳ್ತಂಗಡಿ, ಪ್ರಧಾನ ಸಿವಿಲ್ ನ್ಯಾಯಾಧೀಶರು ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ವಿಜೆಯೇಂದ್ರ ಟಿ. ಎಚ್. ಹಾಗೂ ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ., ಹಿರಿಯ ಸಮಿತಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೊ, ಹಿರಿಯ ವಕೀಲ ಬಿ. ಕೆ. ಧನಂಜಯ ರಾವ್ ಉಪಸ್ಥಿತರಿದ್ದರು.

ಸಾಂತ ಕ್ಲಾಸ್ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಸಂತ ಕ್ಲಾಸ್ ಜೊತೆ ಸೆಲ್ಫಿ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು ಹಾಗೂ ವಕೀಲರಾದ ಮನೋಹರ ಕುಮಾರ್ ರವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಸೇವಿಯರ್ ಪಾಲೇಲಿ ನಿರೂಪಿಸಿ, ಹಿರಿಯ ಸಮಿತಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೊ ಸ್ವಾಗತಿಸಿದರು. ಜೋಸ್ನಾ ಧನ್ಯವಾದವಿತ್ತರು.

Related posts

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya
error: Content is protected !!