26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ವೇಣೂರು: ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಕುಕ್ಕೇಡಿ ಗ್ರಾಮ ಪಂಚಾಯತ್ ಗೆ ಆಗಮಿಸಿ ಕುಕ್ಕೇಡಿ ಎಸ್.ಡಿ.ಎಂ ಐಟಿಐ ಸಂಸ್ಥೆಯ ಸಭಾ ಭವನದಲ್ಲಿ ರಥಯಾತ್ರೆಯ ಸಭಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಎಸ್.ಡಿ.ಎಂ ಐಟಿಐ ಸಂಸ್ಥೆಯ ಪ್ರಾಂಶುಪಾಲರಾದ ವಿಶ್ವೇಶ್ವರ ಪ್ರಸಾದ್ ರವರು ಉದ್ಘಾಟಿಸಿ ಉದ್ಘಾಟನಾ ಮಾತುಗಳನ್ನಾಡಿದರು.

ಸಭಾಧ್ಯಕ್ಷತೆಯನ್ನು ಕುಕ್ಕೇಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಅನಿತಾ ಪೂಜಾರಿಯವರು ವಹಿಸಿದ್ದರು.

ಮುಖ್ಯ ಭಾಷಣಕಾರ ನಿತಿನ್ ಅಂಡಿಂಜೆಯವರು ಪ್ರಧಾನಿ ನರೇಂದ್ರ ಮೋದಿಜಿಯವರ ಸಾಧನೆಗಳು ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ವಿಶೇಷ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸಂಯೋಜಕರಾದ ಜಯಾನಂದರವರು, ಬೆಳ್ತಂಗಡಿ ಯೂನಿಯನ್ ಬ್ಯಾಂಕ್ ನ ವ್ಯವಸ್ಥಾಪಕರಾದ ನಾಗರಾಜ್, ವೇಣೂರು ಕೆನರಾ ಬ್ಯಾಂಕ್ ನ ವ್ಯವಸ್ಥಾಪಕರಾದ ಶ್ರೀಮತಿ ಉಷಾ ಉಪಸ್ಥಿತರಿದ್ದರು.

ಕುಕ್ಕೇಡಿ ಗ್ರಾಮ ಪಂಚಾಯತ್ ನ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಯ ಪದಾಧಿಕಾರಿಗಳು, ಎಸ್.ಡಿ.ಎಂ ಐಟಿಐ ಸಂಸ್ಥೆಯ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕುಕ್ಕೇಡಿ ಗ್ರಾಮ ಪಂಚಾಯತ್ ನ ಪ್ರಭಾರಿ ಅಭಿಜಿತ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ಧನ್ ರವರು ಧನ್ಯವಾದಗೈದರು. ಜಗನ್ನಾಥ್ ರವರು ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ
ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾವಯವ ಕೃಷಿಕ ಶ್ರೀ ಅನಿಲ್ ಹೆಗ್ಡೆ ಮತ್ತು ಶ್ರೀಮತಿ ಸುನಂದಾ ಶೆಟ್ಟಿಯವರನ್ನು ಸನ್ಮಾನಿಸಲಾಯಿತು,ಜೊತೆಗೆ ಪೋಷಣ್ ಯೋಜನೆ ಅಡಿಯಲ್ಲಿ ಬೇಬಿ ತನ್ವಿ ಮತ್ತು ರನ್ವಿತ್ ಸೇರಿದಂತೆ ITI ಸಂಸ್ಥೆಯ ವಿಶೇಷ ಸಾಧನೆಗೈದ ನಾಲ್ವರು ವಿದ್ಯಾರ್ಥಿಗಳನ್ನು ವಿಶೇಷವಾಗಿ ಗೌರವಿಸಲಾಯಿತು.

Related posts

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya
error: Content is protected !!