26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

ವೇಣೂರು:  ವೇಣೂರು ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಜನಮಂಗಲ ಕಾರ್ಯಕ್ರಮದ ಅಂಗವಾಗಿ ಉಚಿತ ಬೃಹತ್ ವೈದ್ಯಕೀಯ ಶಿಬಿರ ಡಿ. 17 ರಂದು ವೇಣೂರಿನ ಭರತೇಶ ಸಮುದಾಯ ಸಭಾಭವನದಲ್ಲಿ ಜರಗಲಿದೆ  ಎಂದು ಮಸ್ತಕಾಭಿಷೇಕ ಸಮಿತಿಯ ಪ್ರದಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಹೇಳಿದ್ದಾರೆ.

ಅವರು ವೇಣೂರು ಯಾತ್ರಿ ನಿವಾಸದಲ್ಲಿ  ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಬೆಳಿಗ್ಗೆ 9ಗಂಟೆಗೆ ಆರಂಭವಾಗಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮ ಪ್ರಸಾದ್ ಅಜಿಲ ವಹಿಸಲಿದ್ದಾರೆ. ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ ಪ್ರವೀಣ್ ಕುಮಾರ್ ಇಂದ್ರ ವೇಣೂರು ಗ್ರಾಪಂ ಅಧ್ಯಕ್ಷ ನೇಮಯ್ಯ ಕುಲಾಲ್, ವೇಣೂರು ಪ್ಯಾಕ್ಸ್ ಅಧ್ಯಕ್ಷ ಸುಂದರ ಹೆಗಡೆ ಬಿ.ಇ. ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ದಂತ ಚಿಕಿತ್ಸೆ,ರಕ್ತದಾನ ಶಿಬಿರ ಮೂಳೆ ಸಾಂಧ್ರತೆಯ ಪರೀಕ್ಷೆ, ಹೃದ್ರೋಗ  ತಪಾಸಣೆ, ಆಯುರ್ವೇದ ಚಿಕಿತ್ಸೆ, ಸ್ಥನ ರೋಗ ತಪಾಸಣೆ, ಸ್ಕ್ರೀನಿಂಗ್, ರಕ್ತಪರೀಕ್ಷೆ ಇತ್ಯಾದಿ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಸ್ತಕಾಭಿಷೇಕದ ಸ್ವಾಗತ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ, ಕೋಶಾಧಿಕಾರಿ ನೀಲೇಶ್ ಕಂಬಳಿ, ಜೊತೆ ಕಾರ್ಯದರ್ಶಿ ಡಾ| ಜಗದೀಶ್, ಸಂಚಾಲಕ ಡಾ| ಶಾಂತಿಪ್ರಸಾದ್ ಉಪಸ್ಥಿತರಿದ್ದರು.

Related posts

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya
error: Content is protected !!