26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಶಿರ್ಲಾಲು: ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಾದ ಕಿಸಾನ್ ಸಮ್ಮಾನ್., ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(ಪಿಎಂಎಫ್‌ಬಿವೈ), ಉಜ್ವಲ ಗ್ಯಾಸ್ ಯೋಜನೆ, ಪಿಂಚಣಿ ಆರೋಗ್ಯ ವಿಮೆ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಮಾಹಿತಿಯನ್ನು ಕೆನರಾ ಬ್ಯಾಂಕ್ ನೋಡೆಲ್ ಅಧಿಕಾರಿ ಉಷಾ ನಾಯಕ್ ಇವರು ವಿಸ್ತಾರವಾಗಿ ವಿವರಿಸಿದರು.

ಕೃಷಿ ಇಲಾಖೆ ಅಧಿಕಾರಿ ಅಭಿಲಾಷ್ ಕೇಂದ್ರ ಸರಕಾರದಿಂದ ರೈತರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಮತ್ತು ಪ್ರಗತಿಪರ ಕೃಷಿಕರನ್ನು ಗ್ರಾಮದಲ್ಲಿ ಸ್ವಚ್ಛತಾ ಕೆಲಸ ಕಾರ್ಯ ಮಾಡುವ ಸ್ವಯಂಸೇವಕರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಕೆನರಾ ಬ್ಯಾಂಕ್ ಶಿರ್ಲಾಲು . ಮುಖ್ಯ ಕಾರ್ಯನಿರ್ವಾಹನ ಅಧಿಕಾರಿ ಫಲ್ಗುಣಿ ಮತ್ತು ಸಿಬ್ಬಂದಿ ವರ್ಗ ಗ್ರಾಮ ಪಂಚಾಯತ್ ಅಧ್ಯಕ್ಷರು ಉಷಾ ಎಂ ಶೆಟ್ಟಿ, ಉಪಾಧ್ಯಕ್ಷ ಸೋಮನಾಥ ಬಲ್ಲಿದಡ್ಡ, ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕುಮಾರ್ ಸಾಮಾನಿ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಪುರಂದರ ಶಿರ್ಲಾಲು ಸ್ವಾಗತಿಸಿದರು. ಕೆನರಾ ಬ್ಯಾಂಕ್ ಸಿಬ್ಬಂದಿ ಉಮೇಶ್ ಶೆಟ್ಟಿ, ಮಾದವ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya
error: Content is protected !!