ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ಡಿ.13 ರಂದು ಆಗಮಿಸಿದ ಪ್ರಧಾನಮಂತ್ರಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥವನ್ನು ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಆರತಿಯನ್ನು ಬೆಳಗಿಸುವ ಮೂಲಕ ಸ್ವಾಗತಿಸಿದರು.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತು ಅಧ್ಯಕ್ಷೆ ಶ್ರೀಮತಿ ಸವಿತಾರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ವೇದಿಕೆಯಲ್ಲಿ ಕಾರ್ಯಕ್ರಮದ ನೋಡೆಲ್ ಅಧಿಕಾರಿಯಾದ ಬ್ಯಾಂಕ್ ಆಪ್ ಬರೋಡಾದ ವ್ಯವಸ್ಥಾಪಕ ವಿನಾಯಕ್ ರವರು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಸವಲತ್ತಿನ ಬಗ್ಗೆ ವಿವರಿಸಿದರು.ಎಸ್. ಹೆಚ್. ಜಿ ಯೋಜನೆಯಡಿಯಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಮಂಜೂರಾದ ನೇರಸಾಲದ ಆದೇಶ ಪತ್ರವನ್ನು ಶ್ರೀದೇವಿ ಸ್ತ್ರೀಶಕ್ತಿ ಸ್ವಸಹಾಯ ಸಂಘ ಮೇಲಂತಬೆಟ್ಟು ಹಾಗೂ ಶ್ರೀದುರ್ಗಾ ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಗುತ್ತಿನಬೈಲು ಸವಣಾಲು ಇವರಿಗೆ ವಿತರಿಸಲಾಯಿತು. ಹಾಗೂ ಕೇಂದ್ರ ಸರಕಾರದ ವಿವಿಧ ಯೋಜನೆಯಡಿಯಲ್ಲಿ ಸಹಾಯಧನ ಪಡೆದು ಆರ್ಥಿಕತೆಯಲ್ಲಿ ಬಲವರ್ಧನೆಯಾದ ಫಲಾನುಭವಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕೇಂದ್ರ ಗುರುತಿಸಿ ಸರಕಾರಾದ ಯೋಜನೆಯಾದ ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಉಚಿತ ಗ್ಯಾಸ್ ಮಂಜೂರುಗೊಳಿಸಿ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿಯವರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವರ್ಗದವರಿಗೂ ಕೇಂದ್ರ ಸರಕಾರದಿಂದ ಸಿಗುವಂತಹ ಮುದ್ರಾ ಯೋಜನೆ, ಪಿಎಂ ಕಿಸಾನ್ ಯೋಜನೆ ಫಸಲ್ ಭೀಮಾ ಯೋಜನೆಯಡಿಯಲ್ಲಿ ಸೌಲಭ್ಯಗಳನ್ನು ಪಡೆಯುವಲ್ಲಿ ಪ್ರೇರಣೆಯನ್ನು ನೀಡುವುದರ ಜೊತೆಗೆ ಸರಕಾರದಿಂದ ಕಾಲಕಾಲಕ್ಕೆ ಸಿಗುವೆ ವಿವಿಧ ಯೋಜನೆಗಳು ಹಾಗೂ ಸವಲತ್ತುಗಳನ್ನು ಗ್ರಾಮಸ್ಥರೆಲ್ಲರೂ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಗೀತಾ ಆರ್. ಸಾಲಿಯಾನ್ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾದ್ಯಕ್ಷರಾದ ಗಣೇಶ್ ಭಂಡಾರಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದವಿತ್ತರು.