29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸ್ಥಾಪಿಸಿದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಬರುವ ಮೊರಾರ್ಜಿ ದೇಸಾಯಿ/ಇಂದಿರಾ ಗಾಂಧಿ/ ಡಾ. ಬಿ.ಆರ್. ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೆಯ ತರಗತಿಯ ಪ್ರವೇಶಕ್ಕಾಗಿ 2024-25ನೇ ಶೈಕ್ಷಣಿಕ ಸಾಲಿಗೆ ಆನ್-ಲೈನ್ ಅರ್ಜಿಯನ್ನು ಕೆಇಎ ಮೂಲಕ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಡಿ.31ರೊಳಗೆ ವಿದ್ಯಾರ್ಥಿಗಳ ವಾಸಸ್ಥಳದ ತಾಲೂಕಿನ ಯಾವುದಾದರೂ ಸಮೀಪದ ವಸತಿ ಶಾಲೆಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮುಂಡಾಜೆ 9242217114, 9482250127, ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ – 9743335673 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!