38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

ಸಾವ್ಯ: ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ ಡಿ.15 ರಂದು ಶಾಲಾ ವಠಾರದಲ್ಲಿ ಜರುಗಲಿದೆ.

ಕಾರ್ಯಕ್ರಮದ ಘನ ಉಪಸ್ಥಿತಿ ಸಭಾಧ್ಯಕ್ಷರು ಯುಟಿ ಖಾದರ್ ಫರೀದ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ.

ಗೌರವ ಉಪಸ್ಥಿತಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್ ಮಧು ಬಂಗಾರಪ್ಪ ಹಾಗೂ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಸಂಜೆ ಅಂಗನವಾಡಿ ವಿದ್ಯಾರ್ಥಿಗಳಿಂದ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.00 ಗಂಟೆಗೆ ಸುನಿಲ್ ಹೆಗ್ಡೆ ಕೊಡಿಯೆಲ್ ಮನೆ ಸಾವ್ಯ ಇವರ ಪ್ರಾಯೋಜಕತ್ವದಲ್ಲಿ ಚೈತನ್ಯ ಕಲಾವಿದರು ಬೈಲೂರು ಇವರಿಂದ ಪಿರ ಪೋಂಡುಗೆ ತುಳು ಹಾಸ್ಯಮಯ ನಾಟಕ ನಡೆಯಲಿದೆ.

Related posts

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya
error: Content is protected !!