September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

ಬೆಳ್ತಂಗಡಿ: ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ನೀಡುವ ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ಭಾಜನರಾಗಿದ್ದಾರೆ. ತಮ್ಮ ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಅಡಿಕೆಯೊಂದಿಗೆ ಮಿಶ್ರಬೆಳೆಯಾಗಿ ಕಾಳುಮೆಣಸು ಮತ್ತು ಬಾಳೆ ಬೆಳೆಯುತ್ತಿರುವ ಇವರು, ಮಿಶ್ರ ಕೃಷಿಯಾಗಿ ದನ ಸಾಕಣೆ, ಕೋಳಿ ಸಾಕಣೆ, ಕುರಿ ಸಾಕಣೆ ಮತ್ತು ಹಂದಿ ಸಾಕಣೆಯನ್ನು ವಾಣಿಜ್ಯ ಮಟ್ಟದಲ್ಲಿ ಮಾಡುತ್ತಿದ್ದು, ಯುವ ಕೃಷಿಕರಿಗೆ ಪ್ರೇರಣೆಯಾಗಿದ್ದಾರೆ.

ಸಂಪೂರ್ಣ ಸಾವಯವ ಕೃಷಿಕರಾಗಿರುವ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್, ಕಾಂಪೋಸ್ಟ್ ಮತ್ತು ಎರೆಗೊಬ್ಬರ ತಯಾರಿಕೆ ಮಾತ್ರವಲ್ಲದೆ, ಉಪ್ಪಿನಂಗಡಿ ಪೇಟೆಯ ಹಸಿ ತ್ಯಾಜ್ಯವನ್ನು ಬೇರ್ಪಡಿಸಿ ಕಾಂಪೋಸ್ಟ್ ಮಾಡಿ ಬೆಳೆಗಳಿಗೆ ನೀಡುತ್ತಿದ್ದಾರೆ. ಬಲೂನ್ ರೂಪದ ಎರಡು ಗೋಬರ್ ಅನಿಲ ಘಟಕಗಳಿದ್ದು, ಗೊಬ್ಬರ ಸ್ವಾವಲಂಬನೆ ಜೊತೆಗೆ ಇಂಧನ ಸ್ವಾವಲಂಬನೆಯನ್ನೂ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಸಾವಯವ ಕೃಷಿ ಮತ್ತು ಗೊಬ್ಬರದ ಸ್ವಾವಲಂಬನೆಗೆ ಉತ್ತೇಜನ ನೀಡುತ್ತಿರುವ ಈ ಸಮಯದಲ್ಲಿ, ಸಣ್ಣ ವಯಸ್ಸಿನಲ್ಲೇ ಕೃಷಿಯಲ್ಲಿ ಸಾಧನೆಯನ್ನು ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿಕನನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷ.

ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿಯನ್ನು ಡಿಸೆಂಬರ್ 13ರಂದು ಆಂಧ್ರಪ್ರದೇಶದ ಪೆದವೆಗಿಯಲ್ಲಿರುವ ಭಾರತೀಯ ತಾಳೆ ಸಂಶೋಧನಾ ಕೇಂದ್ರದಲ್ಲಿ ನಡೆದ ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿಯ 50ನೇ ವಾರ್ಷಿಕ ಸಭೆಯಲ್ಲಿ ದೇವಿಪ್ರಸಾದ್ ಗೌಡ ಕಡಮ್ಮಾಜೆಯವರಿಗೆ ನೀಡಲಾಯಿತು. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಅಡಿಕೆ ಕೃಷಿಕನನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರತೀ ವರ್ಷ ನೀಡಲಾಗುತ್ತಿದೆ. ಇದು ಅಖಿಲ ಭಾರತ ಅಡಿಕೆ ಒಕ್ಕೂಟ ಟ್ರಸ್ಟ್, ಭಾರತೀಯ ಪ್ಲಾಂಟೇಶನ್ ಬೆಳೆಗಳ ಸೊಸೈಟಿ ಮುಖೇನ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾಗಿದೆ.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!