ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ (ಸ್ವಾಯತ್ತ) ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಚ್ಚಿನ ಇದರ ಸಂಯುಕ್ತ ಆಶ್ರಯದಲ್ಲಿ Importance of Library ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ಫೌಂಡೇಷನ್ ನ ತಾಲೂಕು ಸಂಯೋಜಕ ಅಮೃತ್ ಮಾತನಾಡಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವುದರಿಂದ ಜೀವನದಲ್ಲಿ ಪ್ರಬುದ್ಧರಾಗಿ ಬದುಕಲು ಸಾಧ್ಯವಾಗುತ್ತದೆ. ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ವಿಷಯಗಳ ಕುರಿತಾದ ಜ್ಞಾನ ಅತ್ಯಗತ್ಯ. ಆದುದರಿಂದ ಗ್ರಂಥಾಲಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕಡೆ ಕಾರ್ಯಪ್ರವೃತರಾಗಿ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತ್ಯಂತ ಶಿಸ್ತಿನಿಂದ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಆಗ್ನೇಸ್ ಪ್ರಮೀಳಾ ಲೋಬೊ ಮತ್ತು ಸಹ ಶಿಕ್ಷಕ ರಮೇಶ್ ಉಪಸ್ಥಿತರಿದ್ದರು.

ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿ ಶಾಹಿದ್ ಅಫ್ರೀದ್ ಸ್ವಾಗತಿಸಿದರು. ವೀಕ್ಷಿತಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ವಿಯನ್ನ ವೆನಿಸ ಪಾಯಸ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಲಯನ್ಸ್ ಲಿಯೋ ಕ್ಲಬ್ ಅಧ್ಯಕ್ಷರಾಗಿ ಭಾಷಿನಿ, ಕಾರ್ಯದರ್ಶಿಯಾಗಿ ದೀಕ್ಷಿತ್ ಆಯ್ಕೆ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!