September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಆರಂಬೋಡಿ :ಇಲ್ಲಿಯ ಪಾಣಿಮೇರುನಲ್ಲಿ ಡಿ.12 ರಂದು ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ನಂಬ್ರ ಕೆ.ಎಲ್‌ 41-2992 ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.14 ರಂದು ಪ್ರಕರಣ ದಾಖಲಾಗಿದೆ.

ಮಂಗಳೂರು ಭೂವಿಜ್ಞಾನಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಗಿರೀಶ್‌ ಮೋಹನ್‌ ಎಸ್ ರವರ ದೂರಿನಂತೆ, ಡಿ. 12 ರಂದು ಸಂಜೆ ಬೆಳ್ತಂಗಡಿ ತಾಲೂಕು ಆರಂಬೋಡಿ ಗ್ರಾಮದ ಪಾಣಿಮೇರು ಎಂಬಲ್ಲಿ ಲಾರಿ ನಂಬ್ರ ಕೆ.ಎಲ್‌ 41-2992 ರಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಬಗ್ಗೆ ಡಿ. 13 ರಂದು ಸಂಜೆ ಗಿರೀಶ್ ರವರಿಗೆ ವೀಡಿಯೋ ತುಣುಕು ದೊರಕಿದ್ದು, ಈ ಬಗ್ಗೆ ಪರಿಶೀಲಿಸಿ, ಡಿ: 14 ರಂದು ಸಿಸಿ ಕ್ಯಾಮರಾವನ್ನೂ ತಪಾಸಣೆ ನಡೆಸಲಾಗಿ ಅಕ್ರಮ ಮರಳು ಸಾಗಾಟ ಮಾಡುವುದು ದೃಢಪಟ್ಟ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 79/2023 ಕಲಂ: 379 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

Suddi Udaya

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ: ರೂ. 24 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya
error: Content is protected !!