38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

ಪಡಂಗಡಿ : ಮಕ್ಕಳ ಸ್ಥಿತಿಗತಿ, ಅವರುಗಳ ಅಭಿವೃದ್ಧಿ ಹಾಗೂ ಸಂವಿಧಾನಾತ್ಮಕವಾಗಿ ಒದಗಿಸಿರುವ ಹಕ್ಕುಗಳ ಬಗ್ಗೆ ಮಾಹಿತಿ ನೀಡಲು ಮಕ್ಕಳ ಗ್ರಾಮ ಸಭೆಯನ್ನು ಡಿ. 14 ರಂದು ಪಡಂಗಡಿ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಆರೋಗ್ಯ ಕಾಳಜಿಯ ಬಗ್ಗೆ ಮಕ್ಕಳಿಗೆ ಸಮುದಾಯ ಆರೋಗ್ಯ ಅಧಿಕಾರಿ ಸಂಧ್ಯಾ ಹಾಗೂ ಮಕ್ಕಳ ರಕ್ಷಣೆಯ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಪ್ರೇಮ ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಟಿಕ ಆಹಾರವನ್ನು ಒದಗಿಸುವ ಕುರಿತು, ಮಕ್ಕಳ ಬೌದ್ದಿಕ ಬೆಳವಣಿಗೆಗೆ ಆಟ ಪಾಠಗಳ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ರೂಪಿಸುವ ಬಗ್ಗೆ, ಪ್ರತಿ 3 ವರ್ಷದಿಂದ 6 ವರ್ಷದ ಎಲ್ಲಾ ಮಕ್ಕಳು ಅಂಗನವಾಡಿ ಹಾಗೂ ಶಾಲೆಗಳಲ್ಲಿ ದಾಖಲಾತಿ ಶಿಕ್ಷಣವನ್ನು ಪ್ರಾರಂಭಿಸುವ ಕುರಿತು, ಜೀತಪದ್ದತಿ ಹಾಗೂ ಕೃಷಿ ಕಾರ್ಮಿಕ ವೃತ್ತಿಯಲ್ಲಿ ಮಕ್ಕಳನ್ನು ತೊಡಗಿಸುವವರ ವಿರುದ್ಧ ಜಾಗೃತಿ ಮೂಡಿಸುವ ಬಗ್ಗೆ, ಹೆಣ್ಣು ಮಕ್ಕಳ ಪೋಷಣೆ ಹಾಗೂ ರಕ್ಷಣೆಯ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ಅಧ್ಯಕ್ಷ ವಸಂತ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ, ಉಪಾಧ್ಯಕ್ಷರಾದ ಶ್ರೀಮತಿ ವಸಂತಿ, ಪಂಚಾಯತ್ ಕಾರ್ಯದರ್ಶಿ ತಾರಾನಾಥ ನಾಯ್ಕ ಕೆ , ಪಂಚಾಯತ್ ಸದಸ್ಯರುಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರುಗಳು , ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕತೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!