24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಕಲ್ಮಂಜ : ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಕಲ್ಮಂಜ ಗ್ರಾಮ ಪಂಚಾಯತಗೆ ಡಿ.15 ರಂದು ಯಾತ್ರೆಯನ್ನು ಸ್ವಾಗತಿಸಲಾಯಿತು ಹಾಗೂ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಯೋಜನೆಯ ಮಾಹಿತಿ ಹಾಗೂ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ತಿಳಿಸಲಾಯಿತು.

ಕಾರ್ಯಕ್ರಮದ ನೊಡಲ್ ಅಧಿಕಾರಿಯಾಗಿ ಯೂನಿಯನ್ ಬ್ಯಾಂಕ್ ಉಜಿರೆ ಇದರ ಮ್ಯಾನೇಜರ್ ನೇತೃತ್ವದಲ್ಲಿ ಹಾಗೂ ಕಲ್ಮಂಜ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗ್ರಾಮ ಪಂಚಾಯತಿ ಸಭಾಭವನದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ನಿತಿನ್. ಯು. ಮಾಹಿತಿಯನ್ನು ನೀಡಿದರು ಹಾಗೂ ಕಲ್ಮಂಜ ಗ್ರಾಮದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐದು ಜನರನ್ನು ಗುರುತಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಶೀನಾ. ಯಕ್ಷಗಾನ ಕಲಾವಿದರಾದ ಕೊಳ್ತಿಗೆ ನಾರಾಯಣಗೌಡ, ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ದೇವಪ್ಪ ಆಚಾರ್ಯ, ಕಲ್ಮಂಜ ಗ್ರಾಮದ ಪ್ರಗತಿಪರ ಕೃಷಿಕರಾದ ವಿಶ್ವನಾಥಗೌಡ ಹೂoಕ್ರೊಟ್ಟು ಹಾಗೂ ಸರಕಾರಿ ಪ್ರೌಢ ಶಿಕ್ಷಣ ಕಲ್ಮಂಜ ಇದರ 2022 -23 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಕಾರ್ತಿಕ್ ಇವರುಗಳನ್ನು ಸನ್ಮಾನಿಸಲಾಯಿತು.

ಕೇಂದ್ರ ಸರಕಾರದ ಯೋಜನೆಯ ಮಾಹಿತಿಯನ್ನು ವಾಹನದಲ್ಲಿ ವಿಡಿಯೋ ಪ್ರದರ್ಶಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶ್ರೀಮತಿ ವಿಮಲಾ ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪೂರ್ಣಿಮಾ ಸಿಎ ಬ್ಯಾಂಕ್ ಮುಂಡಾಜೆ ಇದರ ನಿರ್ದೇಶಕರಾದ ರಾಘವ ಕಲ್ಮಂಜ, ಶಶಿಧರ್ ಕಲ್ಮಂಜ, ಗ್ರಾಮ ಪಂಚಾಯತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು ಹಾಗೂ ಸುಮಾರು 400 ಕ್ಕೂ ಮಿಕ್ಕಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಧಿಕಾರಿ ಇಮ್ತಿಯಾಜ್ ಕೆ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya
error: Content is protected !!